ಫುಡ್ ಪಾಯ್ಸನ್ ಆಗಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ….
ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಶುಕ್ರವಾರ ನಡೆದಿದೆ.
ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನೀಯರಿಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ವಾಂತಿ ಕಾಣಿಸಿಕೊಂಡಿದೆ.
ವಿದ್ಯಾರ್ಥಿನಿಯರನ್ನು ಮೊದಲು ಸ್ಥಳೀಯ ಕ್ಲೀನಿಕ್ನಲ್ಲಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಬಳಿಕ ತುಂಬಾ ಅಸ್ವಸ್ಥಗೊಂಡಿರುವ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಬಿಎಚ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ 12ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕ್ಲಿನಿಕ್ನಲ್ಲಿ ಚಿಕಿತ್ಸೆ ನೀಡಿ, ಅವರಿಗೆ ಹಾಸ್ಟೆಲ್ನಲ್ಲಿ ವಿಶ್ರಾಂತಿ ನೀಡಲಾಗುತ್ತಿದೆ.
ಎಲ್ಲಾ ವಿದ್ಯಾರ್ಥಿಗಳು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಹಾಸ್ಟೆಲ್ ಆಹಾರ ಅಥವಾ ನೀರಿನಲ್ಲಿ ವಿಷಪೂರಿತವಾಗಿರುವ ಸಾಧ್ಯತೆ ಇದೆ.








