ಪುಟಿನ್ ಗೆ ಸಂಧಾನದ ಮಾತುಕತೆ ಕರೆ ನೀಡಿದ ಝೆಲೆನ್ಸ್ಕೀ – Saaksha Tv
ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್‌ಗೆ ಸಂಧಾನಕ್ಕೆ ಕರೆ ನೀಡಿದ್ದು, ಮಧ್ಯಸ್ಥಿಕೆ ವಹಿಸಲು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಮನವಿ ಮಾಡಿದ್ದಾರೆ.
ಉಕ್ರೇನ್-ರಷ್ಯಾ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷ ನಡೆಯುತ್ತಿದ್ದು, ಝೆಲೆನ್ಸ್ಕಿ ಇದನ್ನು ಮಾತುಕತೆ ಮೂಲಕ ಪರಿಹರಿಸಲು ಜೆರುಸಲೇಮ್‌ನಲ್ಲಿ ಸಂಧಾನಕ್ಕೆ ಬರುವಂತೆ ಪುಟಿನ್‌ಗೆ ಕರೆ ನೀಡಿದ್ದಾರೆ . ಇದರಲ್ಲಿ ಮಧ್ಯವರ್ತಿಯಾಗಿ ಮಾತುಕತೆ ಮುನ್ನಡೆಸಲು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಗೆ ಝೆಲೆನ್ಸ್ಕಿ ತಿಳಿಸಿದ್ದಾರೆ.
ವರದಿಗಳ ಪ್ರಕಾರ ಝೆಲೆನ್ಸ್ಕಿ ಸಂಘರ್ಷವನ್ನು ಪರಿಹರಿಸಲು ರಷ್ಯಾ ಅಥವಾ ಉಕ್ರೇನ್‌ನಲ್ಲಿ ಮಾತುಕತೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ನಾನು ಇಸ್ರೇಲ್‌ನ ಜೆರುಸಲೇಮ್ ಅನ್ನು ಆಯ್ದುಕೊಂಡಿದ್ದೇನೆ. ಎರಡು ಶತ್ರು ರಾಷ್ಟ್ರಗಳ ಮಾತುಕತೆಗೆ ಮಧ್ಯವರ್ತಿಯಾಗಲು ಬೆನೆಟ್‌ಗೆ ತಿಳಿಸಿದ್ದೇನೆ ಎಂದಿದ್ದಾರೆ.