ಅವಧಿಪೂರ್ವ ಚುನಾವಣೆ: ಸ್ಪಷ್ಟನೆ ನೀಡಿದ ಸಿಎಂ! Basavaraj Bommai on Assembly Elections Cabinet Reshuffle Karnataka Govt
ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ
ವರಿಷ್ಠರು ನಮಗೆ ಯಾವುದೇ ಸೂಚನೆ ಕೊಟ್ಟಿಲ್ಲ
ನಮ್ಮ ಪಕ್ಷವನ್ನು ಬಿಟ್ಟು ಯಾರೂ ಕೂಡ ಹೋಗೋದಿಲ್ಲ
ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಬೆಂಗಳೂರು : ಅವಧಿ ಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಅವಧಿಪೂರ್ವ ಚುನಾವಣೆ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬೊಮ್ಮಾಯಿ, ಈ ಬಗ್ಗೆ ಯಾವುದೇ ಚರ್ಚೆಯೇ ನಡೆದಿಲ್ಲ.
ವರಿಷ್ಠರು ನಮಗೆ ಯಾವುದೇ ಸೂಚನೆ ಕೊಟ್ಟಿಲ್ಲ. ನಮ್ಮ ಪಕ್ಷವನ್ನು ಬಿಟ್ಟು ಯಾರೂ ಕೂಡ ಹೋಗೋದಿಲ್ಲ.
ಬೇರೆ ಪಕ್ಷದಿಂದ ಬಿಜೆಪಿಗೆ ಬರೋರನ್ನ ಕಾದು ನೋಡಿ ಎಂದಿದ್ದಾರೆ.

ಇನ್ನೊಂದು ಪಕ್ಷಕ್ಕೆ ಯಾರೂ ನಮ್ಮಿಂದ ಹೋಗಲ್ಲ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಕಾದು ನೋಡಿ ಎಂದು ತಿಳಿಸಿದ್ದಾರೆ.
ಇನ್ನು ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ವರಿಷ್ಠರು ಇನ್ನೂ ಸೂಚನೆ ಕೊಟ್ಟಿಲ್ಲ. ವರಿಷ್ಠರ ಸೂಚನೆ ಕೊಟ್ಟ ಮೇಲೆ ದೆಹಲಿಗೆ ಹೋಗ್ತೀನಿ.
ವರಿಷ್ಠರು ಯಾವಾಗ ಹೇಳ್ತಾರೋ ಆಗ ಸಚಿವ ಸಂಪುಟ ಪುನಾರಚನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
Basavaraj Bommai on Assembly Elections Cabinet Reshuffle Karnataka Govt








