Karnataka | ಮಹಿಳೆಯರಿಗೆ ಉಚಿತ ಬಸ್ ಪಾಸ್: ಸಚಿವ!
ಗದಗದಲ್ಲಿ ಸಚಿವ ಬಿ.ಶ್ರೀರಾಮುಲು ಭರವಸೆ
ಬಿಜೆಪಿ ಅಧಿಕಾರಕ್ಕೆ ಬಂದರೆ ಉಚಿತ ಬಸ್ ಪಾಸ್
ಬೊಮ್ಮಾಯಿ 3 ಸಾವಿರ ಕೋಟಿ ಇಲಾಖೆಗೆ ನೀಡಿದ್ದಾರೆ
ಕೆ ಎಸ್ ಆರ್ ಟಿ ಸಿ ಯಾವುದೇ ಆಸ್ತಿ ಅಡಮಾನವಾಗಿ ಇಟ್ಟಿಲ್ಲ
ಗದಗ : ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೇ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಘೋಷಣೆ ಮಾಡಿದ್ದಾರೆ.
ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮುಲು, ನಾವು ಮತ್ತೆ ಅಧಿಕಾರಕ್ಕೆ ಬಂದರೇ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಡುವ ವ್ಯವಸ್ಥೆ ಬಿಜೆಪಿ ಮಾಡುತ್ತದೆ ಎಂದರು.
ಕೆಎಸ್ಆರ್ಟಿಸಿ ಯಾವುದೇ ಆಸ್ತಿ ಅಡಮಾನವಾಗಿ ಇಟ್ಟಿಲ್ಲ. ಬೆಂಗಳೂರು ಶಾಂತಿ ನಗರ ಕಾಂಪ್ಲೆಕ್ಸ್ ಅಡಮಾನ ಇಡಲಾಗಿದೆ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಸಂಬಳ ಬಾಕಿ ವಿಚಾರವಾಗಿ ಮಾತನಾಡಿ, ಇನ್ನೂ ಒಂದೂವರೆ ತಿಂಗಳ ಸಂಬಳ ಮಾತ್ರ ಬಾಕಿ ಇದೆ.
ಒಂದು ವಾರದೊಳಗೆ ಆ ಬಾಕಿ ಸಂಬಳ ನೀಡಿದರೆ ಕ್ಲಿಯರ್ ಆಗುತ್ತೆ. ಮುಂದಿನ ತಿಂಗಳಿನಿಂದ ನಿರಂತರವಾಗಿ ಸಂಬಳ ನೀಡಲಾಗುತ್ತದೆ.
ಈ ಹಿಂದೆ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಸಾರಿಗೆ ಇಲಾಖೆಗೆ ಮೂರು ಸಾವಿರ ಕೋಟಿ ಕೊಟ್ಟಿದ್ದಾರೆ.
ಹೀಗಾಗಿ ಇನ್ನು ಮುಂದೆ ಚಾಲಕರ, ನಿರ್ವಾಹಕರು ಹಾಗೂ ಸಿಬ್ಬಂದಿ ಸಂಬಳಕ್ಕೆ ಕಾಯಬೇಕಿಲ್ಲ ಎಂದು ಹೇಳಿದ್ದಾರೆ.
ಇನ್ನು ಸಾರಿಗೆ ಆಸ್ತಿ ಅಡಮಾನ ಇಟ್ಟಿರುವುದರ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಅಡಮಾನ ಇಟ್ಟಿದ್ದು ವೈಯಕ್ತಿಕ ಬಳಕೆಗೆ ಅಲ್ಲ. ಸಿಬ್ಬಂದಿ ಭವಿಷ್ಯದ ನಿಧಿಗಾಗಿ.
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಕಡೆ 16 ಎಕರೆ ಅಡಮಾನ ಇಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲೂ ಕೆಲವು ಜಮೀನು ಅಡಮಾನ ಇಡಲಾಗಿದೆ. ಸಂಸ್ಥೆ ಜಾಗ ಅಡಮಾನ ಇಟ್ಟ ಹಣ ಸಿಬ್ಬಂದಿ ಭವಿಷ್ಯ ನಿಧಿಗೆ ನೀಡಲಾಗಿದೆ ಎಂದಿದ್ದಾರೆ ಸಚಿವರು.
Karnataka women will get free bus pass said minister B Sriramulu









