Andhra Pradesh | ಭೀಕರ ಅಪಘಾತಕ್ಕೆ 5 ಬಲಿ
ಕೃಷ್ಣಾ ಜಿಲ್ಲೆ : ಚಾಲಕನ ನಿಯಂತ್ರಣ ತಪ್ಪಿ ಕಾರು ರಾಜಾಕಾಲುವೆಗೆ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಜಗ್ಗಯ್ಯಪೇಟೆಯಲ್ಲಿ ನಡೆದಿದೆ.
ಮೃತರನ್ನು ಕುಟುಂಬರಾವ್, ಇಂದಿರಾ, ಶಾಂತಿ, ತಾಯಿ ಮೇರಿ ಮತ್ತು ಆರು ತಿಂಗಳ ಮಗು ರಾಜಕುಮಾರ್ ಎಂದು ಗುರುತಿಸಲಾಗಿದೆ.
ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಮಗುವಿನ ಅನ್ನಪ್ರಾಶನಕ್ಕಾಗಿ ಕುಟುಂಬ ಸಮೇತ ಏಲೂರಿಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಇನ್ನು ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
FIVE KILLED IN ANDHRA ROAD ACCIDENT









