ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ | ಒಬ್ಬ ಉಗ್ರನ ಹತ್ಯೆ – Saaksha Tv
ಜಮ್ಮು&ಕಾಶ್ಮೀರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಚಾರ್ಸೂ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಕಾಶ್ಮೀರಿ ಪೊಲೀಸರು ಜಂಟಿಯಾಗಿ ನಡೆಸಿದ ಎನ್‍ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಿದ್ದಾರೆ.
ಇಂದು ಬೆಳಿಗ್ಗೆ ಕಾಶ್ಮೀರಿ ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು, ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರರನನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರಿ ವಲಯ ಪೊಲೀಸ್ ಟ್ವೀಟ್ ಮಾಡಿದೆ.
ಈ ಕುರಿತು ಪ್ರತಿಕ್ರಯಿಸಿದ ಕಾಶ್ಮೀರ ಐಜಿಪಿ ವಿಜಯ್ ಕುಮಾರ್, ಹತ್ಯೆಗೀಡಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
#AwantiporaEncounterUpdate: 01 #terrorist killed. #Operation going on. Further details shall follow. @JmuKmrPolice https://t.co/oUZGLRAIjo
— Kashmir Zone Police (@KashmirPolice) March 15, 2022
ಅಲ್ಲದೆ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಭದ್ರತಾ ತಂಡ ಸ್ಥಳವನ್ನು ಸುತ್ತುವರೆದಾಗ ಅಡಗಿಕೊಂಡಿದ್ದ ಭಯೋತ್ಪಾದಕ ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ.
ಹೆಚ್ಚಿನ ಭಯೋತ್ಪಾದಕರು ಈ ಜಾಗದಲ್ಲಿ ಅಡಗಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಕಾಶ್ಮೀರದಲ್ಲಿ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ತಂಡಗಳ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ತಿಳಿದು ಬಂದಿದೆ.
ಇದು ಈ ವರ್ಷದ 21ನೇ ಎನ್‍ಕೌಂಟರ್ ಆಗಿದ್ದು, ಇಲ್ಲಿಯವರೆಗೆ, ಭದ್ರತಾ ಪಡೆಗಳು 36 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. 20ಕ್ಕೂ ಹೆಚ್ಚು ಭಯೋತ್ಪಾದಕರನ್ನು ಜೀವಂತವಾಗಿ ಸೆರೆಹಿಡಿಯಲಾಗಿದ್ದು, ಭಯೋತ್ಪಾದಕ ಸಹಚರರ ವಿರುದ್ಧದ ಕಾರ್ಯಾಚರಣೆಯೂ ಮುಂದುವರಿದಿದೆ.