ಹುಬ್ಬಳ್ಳಿಯ ಕೆ.ಎಲ್.ಇ ಎಂಜಿನಿಯರಿಂಗ್ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಗೋಕುಲ ರಸ್ತೆಯ ಕೆ.ಎಲ್.ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೇಂದ್ರ ಸರಕಾರದ ಕೋಟಾದಡಿಯಲ್ಲಿ ಪ್ರವೇಶ ಪಡೆದಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿತ್ತು. ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮೀರ್ ಮೊಹಿದ್ದೀನ್ ವಾನಿ, ಬಾಸೀತ್ ಆಸೀಫ್ ಸೋಫಿ ಮತ್ತು ತಾಲಿಬ್ ಮಜೀದ್ ಘೋಷಣೆ ಕೂಗಿದ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಅವರ ವಿರುದ್ಧ ದೇಶದ್ರೋಹ ಮತ್ತು ಕೋಮು ಸೌಹಾರ್ದ ಕದಡುವ ಆರೋಪದಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿಗಳಾದ ಇವರು ಪುಲ್ವಾಮಾ ದಾಳಿಯ ಕರಾಳ ದಿನವಾದ ಶುಕ್ರವಾರ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಪಾಕಿಸ್ತಾನ ಜಿಂದಾಬಾದ್, ಕಾಶ್ಮೀರಿ ಅಜಾದಿ ಕರೇಂಗೆ ಎಂಬಂತಹ ಘೋಷಣೆ ಕೂಗಿದ್ದರು. ಅದನ್ನು ವಿಡಿಯೋ ಮಾಡಿ ತಮ್ಮ ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದು, ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಇವರ ದೇಶದ್ರೋಹ ಕೃತ್ಯ ಬೆಳಕಿಗೆ ಬಂದಿದೆ. ಕಾಲೇಜು ಆಡಳಿತ ಮಂಡಳಿ ಮೂವರನ್ನೂ ಆಮಾನತುಗೊಳಿಸಿದೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








