ಆಪ್ ನಾಯಕ ಭಗವಂತ್ ಮಾನ್ ಬುಧವಾರ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪಂಜಾಬ್‌ನ ಶಹೀದ್ ಭಗತ್ ಸಿಂಗ್ (ಎಸ್‌ಬಿಎಸ್) ನಗರ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪಂಜಾಬ್ ರಾಜ್ಯಪಾಲರಾದ ಬನ್ವಾರಿಲಾಲ್ ಪುರೋಹಿತ್ ಅವರು ಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಭಗವಂತ್ ಮನ್ ಪಂಜಾಬಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸದಾಗಿ ಆಯ್ಕೆಯಾದ ಎಎಪಿ ಶಾಸಕರಲ್ಲದೆ, ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ನಾಯಕರು ಹಳದಿ ಪೇಟ ಧರಿಸಿ ಸಮಾರಂಭದಲ್ಲಿ ಭಾಗವಹಿಸಿದ್ದರು.
117 ಸದಸ್ಯ ಬಲದ ಪಂಜಾಬ್ ಅಸೆಂಬ್ಲಿಯಲ್ಲಿ ಎಎಪಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಮತ್ತು ಎಸ್‌ಎಡಿ-ಬಿಎಸ್‌ಪಿ ಮೈತ್ರಿಯನ್ನ ಸೋಲಿಸಿತು.
Bhagwant Mann sworn in as Punjab chief minister








