HIJAB | ಶಿಕ್ಷಣ ಸಚಿವರಿಂದ ಪ್ರಮುಖ ಸೂಚನೆ!
ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ
ವಿದ್ಯಾರ್ಥಿಗಳಿಗೆ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ
ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ
ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ
ಬೆಂಗಳೂರು : ತರಗತಿಯಲ್ಲಿ ಇನ್ನು ಹಿಜಾಬ್ ಧರಿಸಲು ಅವಕಾಶ ಇಲ್ಲ. ಹೈಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಹಿಜಾಬ್ ತೀರ್ಪು ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಕೆ ನೀಡುವುದಿಲ್ಲ.
ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ.
ಹೀಗಾಗಿ ಶಿಕ್ಷಣ ಇಲಾಖೆ ಕೊಂಚ ಸಡಿಲಿಕೆ ನೀಡಿತ್ತು. ಇನ್ನುಮುಂದೆ ಮತ್ತೆ ಯಾವುದೇ ಕಾರಣಕ್ಕೂ ಹಿಜಾಬ್ ಅವಕಾಶ ಇಲ್ಲ ಎಂದು ಸ್ಪಷ್ಟಡಿಸಿದ್ದಾರೆ.
ಇನ್ನು ದ್ವಿತೀಯ ಪಿಯುಸಿ ಪರೀಕ್ಷೆಗೆ ತಿಂಗಳು ಮಾತ್ರ ಬಾಕಿ ಇದೆ. ಈ ನಡುವೆಯೇ ಸುಪ್ರೀಂ ಕೋರ್ಟ್ ಮೊರೆ ಹೋದರೆ, ಅಲ್ಲಿಯ ತೀರ್ಪು ಬರುವವರೆಗೂ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಕೆಲ ಮುಸ್ಲಿಂ ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದರು.
ಪರೀಕ್ಷೆಯಲ್ಲಿ ಆದರೂ ಹಿಜಾಬ್ ಧರಿಸಿ ಎಕ್ಸಾಂ ಬರೆಯಲು ಅವಕಾಶ ನೀಡಿ ಎಂದು ಕೇಳಿದ್ದರು. ಆದರೆ, ಅದಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ. no relaxation of rules for appearing exams and classes wearing hijabs









