Hubli | ಕಾರು ಪಲ್ಟಿ: ಸ್ಥಳದಲ್ಲೇ 2 ಸಾವು, 4 ಗಂಭೀರ!
ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಬಳಿ ಘಟನೆ
ರಂಜಿತ್ ಮತ್ತು ರಾಕೇಶ್ ಮೃತ ದುರ್ದೈವಿಗಳು
ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ಗಬ್ಬೂರ ಬೈಪಾಸ್ ಬಳಿ ನಡೆದಿದೆ.
ಗುರುವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ರಂಜಿತ್ ಮತ್ತು ರಾಕೇಶ್ ಮೃತ ವ್ಯಕ್ತಿಗಳಾಗಿದ್ದು, ಇವರು ಚಿಕ್ಕಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.
ಇನ್ನು ಕಾರಿನಲ್ಲಿದ್ದ ನಿತಿನ್, ಅಮಿತ್, ಪ್ರಮೋದ್, ಲೋಕೇಶ್ ಎಂಬುವವರಿಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿದ್ದು, ಕಿಮ್ಸ್ಗೆ ದಾಖಲಿಸಲಾಗಿದೆ.
ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
two people died four injured in car accident at Near Hubli









