Breaking – ಪಾವಗಡ ಬಳಿ ಖಾಸಗಿ ಬಸ್ ಪಲ್ಟಿ, 8 ಮಂದಿ ಸಾವು 25 ಕ್ಕೂ ಹೆಚ್ಚು ಜನರಿಗೆ ಗಾಯ
ಖಾಸಗಿ ಬಸ್ ಪಲ್ಟಿಯಾಗಿ 8 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೋಕಿನ ಪಳವಳ್ಳಿ ಕಟ್ಟೆ ಹತ್ತಿರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಸ್ಥಳಿಯರ ನೆರವಿನಿಂದ ಗಾಯಳುಗಳನ್ನ ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಸೇರಿ ನೂರಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು, ಬಸ್ ಚಾಲಕ ವೇಗವಾಗಿ ಚಲಾಯಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕಾಲೇಜಿಗೆ ಮತ್ತು ಕೆಲಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗಿದ್ದಿದದ್ದರಿಂದ ಬಸ್ ಓವರ್ ಲೋಡ್ ಆಗಿತ್ತು. ಅಲ್ಲದೆ ಬಸ್ ಟಾಪ್ ನಲ್ಲಿ ಸಹ ಪ್ರಯಾಣಿಕರು ಕುಳಿತಿದ್ದರು. ಪಳವಳ್ಳಿ ಕಟ್ಟೆ ತಿರುವಿನಲ್ಲಿ ದುರಂತ ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
ಅಪಘಾತದ ನಂತರ ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.. ಗಾಯಗೊಂಡವರನ್ನು ತಕ್ಷಣ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರನ್ನು ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನೆ ಮಾಡಲಾಗುತ್ತಿದೆ.
Private bus accident near Pavagada, 8 people killed, over 25 injured








