ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Bangalore | ಹಂತ ಹಂತವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕಿತ್ತು : ಎಮ್. ಮದನ್ ಗೋಪಾಲ್

Mahesh M Dhandu by Mahesh M Dhandu
March 19, 2022
in Marjala Manthana, Newsbeat, ಮಾರ್ಜಲ ಮಂಥನ
NEP Conversation Program by Universal Group Education saaksha tv
Share on FacebookShare on TwitterShare on WhatsappShare on Telegram

Bangalore | ಹಂತ ಹಂತವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕಿತ್ತು : ಎಮ್. ಮದನ್ ಗೋಪಾಲ್

ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸಂವಾದ ಕಾರ್ಯಕ್ರಮ

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತವಾಗಿದೆ : ಪ್ರೊ. ಗೌರೀಶ್ ಜೋಷಿ

ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿಗೆ ತರಬಹುದಿತ್ತು. ಉನ್ನತ ಶಿಕ್ಷಣ ಮಟ್ಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಕ್ಕೂ ಮೊದಲು ಸ್ವಲ್ಪ ಯೋಚನೆ ಮಾಡಬೇಕಿತ್ತು ಎಂದು ರಾಷ್ಟ್ರೀಯ ಶಿಕ್ಷಣ ನೀತಿಯ ಕರ್ನಾಟಕ ಟಾಸ್ಕ್ ಫೋರ್ಸ್ ನ ಚೇರ್ ಮೆನ್ ಹಾಗೂ ನಿವೃತ್ತ ಐಎಸ್ ಅಧಿಕಾರಿ ಎಮ್. ಮದನ್ ಗೋಪಾಲ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸವಾಲುಗಳು ಮತ್ತು ಅವಕಾಶಗಳು ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿದ ಕೂಡಲೇ ಕಾಲೇಜಿಗಳಲ್ಲಿ ಅನುಷ್ಠಾನ ಬರುತ್ತೆ ಅಂತಾ ನನಗೆ ಅನಿಸುತ್ತಿಲ್ಲ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ನಿಯಮಾವಳಿಯ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಹೆಚ್ಚಿನ ಚರ್ಚೆಯಾಗಬೇಕಿದೆ. ಮುಂದಿನ ವರ್ಷ ಮೊದಲ ಹಂತವಾಗಿ ನರ್ಸರಿ ಮಟ್ಟದಲ್ಲಿ ಈ ನೀತಿ ಜಾರಿ ಮಾಡಬೇಕು. ತರಗತಿ ಮೂರರಿಂದ ಹೊಸ ಶಿಕ್ಷಣ ನೀತಿ ಜಾರಿ ಮಾಡುವಾಗ ನಾವು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.

ಶಾಲಾ ಮಟ್ಟದ ಶೈಕ್ಷಣಿಕ ಸುಧಾರಣೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆದ್ರೆ ಉನ್ನತ ಶಿಕ್ಷಣ ಮಟ್ಟದಲ್ಲಿ ಸರ್ಕಾರ ಇನ್ನಷ್ಟು ಗಮನಹರಿಸಬೇಕಿತ್ತು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಮತ್ತು ಸಮಗ್ರವಾಗಿ ಅರ್ಥಮಾಡಿಕೊಂಡು ಕಾರ್ಯರೂಪಕ್ಕೆ ತರುವಲ್ಲಿ ನಾವು ಎಡವುತ್ತಿದ್ದೇವೆ ಎಂದು ಹೇಳಿದ್ರು.

NEP Conversation Program by Universal Group Education  saaksha tv

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಮತ್ತು ಜವಾಬ್ದಾರಿಯನ್ನು ಅತ್ಯಂತ ವಿವರವಾಗಿ ಚರ್ಚಿಸಲಾಗಿದೆ. ತರಗತಿ-3, ತರಗತಿ -6 ಮತ್ತು ತರಗತಿ-9ರ ಹಂತಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಅಭಿಮತ ವ್ಯಕ್ತಪಡಿಸಿದ್ರು.

ಇನ್ನು ಸಿಇಎಸ್‍ಎಸ್ ನಿರ್ದೇಶಕರಾದ ಪ್ರೊ. ಗೌರೀಶ್ ಜೋಷಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತವಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಒಟ್ಟಾರೆ ಸೂತ್ರಗಳನ್ನು ಅತ್ಯಂತ ನಿಖರವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದರು.

ಸಮಾಜದ ವಿವಿಧ ವರ್ಗಗಳಾದ ಸಾಮಾಜಿಕ ಆರ್ಥಿಕ ವರ್ಗದ ಜೊತೆ ಬೇರೆ ಬೇರೆ ವರ್ಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಶೈಕ್ಷಣಿಕ ವಲಯ ಸೃಷ್ಟಿಸಬೇಕಿದೆ. ಕೇವಲ ತಯಾರಿ ಹಂತವನ್ನೇ ಮುಂದುವರೆಸಿಕೊಂಡು ಹೋದರೆ ಅದು ತಯಾರಿ ಹಂತದಲ್ಲಿಯೇ ಇರುತ್ತದೆ. ನಾವೀಗ ರಾಷ್ಟ್ರೀಯ ಶೈಕ್ಷಣಿಕ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಿರುವ ಹಂತದಲ್ಲಿದ್ದೇವೆ. ಕೇಂದ್ರ ರೂಪಿಸಿರುವ ಉನ್ನತ ಶಿಕ್ಷಣದ ನೀತಿಯನ್ನು ಸಹ ಕೂಲಂಕೂಷವಾಗಿ ಅಧ್ಯಯನ ನಡೆಸಬೇಕಿದೆ. ಹಾಗೇ ಮಾರ್ಪಾಡುಗಳಿದ್ದರೆ ಬದಲಾವಣೆ ಮಾಡಿಕೊಂಡು ಶೀಘ್ರದಲ್ಲಿಯೇ ಜಾರಿಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ರು.

ಈ ಸಂವಾದ ಕಾರ್ಯಕ್ರಮದಲ್ಲಿ ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಆರ್. ಉಪೇಂದ್ರ ಶೆಟ್ಟಿಯವರು ಹಾಗೂ ದಕ್ಷಿಣ ಭಾರತದ ವಿವಿಧ ಕಾಲೇಜಿನ ಪ್ರಿನ್ಸಿಪಾಲ್ ಗಳು ಸೇರಿದಂತೆ ಶಿಕ್ಷಣ ಸಂಸ್ಥೆಯ ಭೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. NEP Conversation Program by Universal Group Education

Tags: M. Madan GopalNational Education PolicyR Upendra shetty
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram