JDS | ನಾಡು, ನುಡಿ, ನೆಲ, ಜಲದ ಬಗ್ಗೆ ಜೆಡಿಎಸ್ ರಾಜಿ ಮಾಡಿಕೊಳ್ಳುವುದಿಲ್ಲ
ಬೆಂಗಳೂರು : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆ ಕೈಗೊಂಡಿರುವ ವಿವಾದಾತ್ಮಕ ನಿರ್ಣಯದ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಒಮ್ಮತದ ಖಂಡನಾ ನಿರ್ಣಯ ಅಂಗೀಕಾರ ಮಾಡಿರುವುದನ್ನು ಜಾತ್ಯತೀತ ಜನತಾದಳ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಂಡಿತ್ತು. ಇದನ್ನ ವಿರೋಧಿಸಿ ರಾಜ್ಯ ವಿಧಾನಸಭೆಯಲ್ಲಿ ತಮಿಳುನಾಡು ವಿಧಾನಸಭೆ ಕೈಗೊಂಡಿರುವ ವಿವಾದಾತ್ಮಕ ನಿರ್ಣಯದ ವಿರುದ್ಧ ಒಮ್ಮತದ ಖಂಡನಾ ನಿರ್ಣಯ ಅಂಗೀಕಾರ ಮಾಡಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ರಾಜ್ಯ ಸರಕಾರವು ನಿರ್ಣಯ ಅಂಗೀಕಾರ ಮಾಡಿದ ಮೇಲೆ ಕಾಲಹರಣ ಮಾಡುವುದು ಬೇಡ. ತಕ್ಷಣವೇ ಕೇಂದ್ರ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಒಪ್ಪಿಗೆ ಪಡೆದು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಬೇಕು.
ನಾಡು, ನುಡಿ, ನೆಲ, ಜಲದ ಬಗ್ಗೆ ನಮ್ಮ ಪಕ್ಷ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅಣೆಕಟ್ಟು ನಿರ್ಮಾಣ ಮಾಡಲು ಸರಕಾರಕ್ಕೆ ಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆ ಎಂಬುದನ್ನು ಸ್ಪಷ್ಟ ಮಾತುಗಳಲ್ಲಿ ಹೇಳಬಯಸುತ್ತೇನೆ ಎಂದಿದ್ದಾರೆ. karnataka-assembly-passed-resolution-to-demand H D Kumaraswamy reaction









