H D Kumaraswamy | ಸಿದ್ದರಾಮಯ್ಯ ಮಾತ್ರ ಬ್ರಿಲಿಯಂಟ್ ಅಲ್ಲ
ಕೋಲಾರ : ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ರ ಬ್ರಿಲಿಯಂಟ್ ಅಲ್ಲ. ನನಗೂ ಜ್ಞಾಪಕ ಶಕ್ತಿ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎತ್ತಿನ ಹೊಳೆ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಮಾತ್ರ ಬ್ರಿಲಿಯಂಟ್ ಅಲ್ಲ. ನನಗೂ ಜ್ಞಾಪಕ ಶಕ್ತಿ ಇದೆ. ನಾನು ಅಂದೆ ಹೇಳಿದ್ದೆ ಕೋಲಾರಕ್ಕೆ ಒಂದು ವರ್ಷದಲ್ಲಿ ಎತ್ತಿನಹೊಳೆ ನೀರು ಬಂದರೆ ತಲೆ ಬೋಳಿಸಿಕೊಳ್ಳುವೆ ಎಂದಿದ್ದೆ. ಅಂದು ತಲೆ ತುಂಬಾ ಕೂದಲಿತ್ತು, ಇಂದು ಇಲ್ಲವಾಗಿದೆ ಎಂದು ವ್ಯಂಗ್ಯವಾಡಿದರು.
ಇನ್ನು ಎತ್ತಿನಹೊಳೆ ಯೋಜನೆಗೆ 2014ರಲ್ಲಿ ಅಡಿಪಾಯ ಹಾಕಿ ಇದುವರೆಗೂ ನೀರು ಕೊಟ್ಟಿಲ್ಲ. ಇನ್ನೂ 50 ವರ್ಷ ಆದರೂ ರಾಷ್ಟ್ರೀಯ ಪಕ್ಷಗಳಿಂದ ನೀರು ಕೊಡಲು ಆಗಿಲ್ಲ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್, ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡಿದ್ದೇವೆ. ಎರಡು ರಾಷ್ಟ್ರೀಯ ಪಕ್ಷಗಳು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿವೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿಕೊಂಡರು.