ಇನ್ನೂ 6 ತಿಂಗಳವರೆಗೆ ವಿಸ್ತರಿಸಿದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ
ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 6 ತಿಂಗಳು ವಿಸ್ತರಿಸಲು ಕೇಂದ್ರ ಸರಕಾರ ನಿರ್ಧರಿಸಿ, ದೇಶವಾಸಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ವರೆಗೆ ಅಂದರೆ ಇನ್ನೂ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೇ ಈ ಯೋಜನೆಯು ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಲಾಭವಾಗಲಿದೆ ಎಂದು ತಿಳಿಸಿದರು.
ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಡಜನರಿಗೆ ನೆರವಾಗಲು ಮಾರ್ಚ್ 2020ರಲ್ಲಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿತ್ತು. ಪಡಿತರ ಕಾರ್ಡುದಾರರಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಆಹಾರ ಧಾನ್ಯಗಳನ್ನು ಈ ಯೋಜನೆಯ ಮೂಲಕ ಒದಗಿಸಲಾಗುತ್ತದೆ.
ಈ ಯೋಜನೆಯಡಿ ಕೇಂದ್ರವು ತಿಂಗಳಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಕೇಂದ್ರವು 2.6 ಟ್ರಿಲಿಯನ್ ರೂ.ಗಳನ್ನು ಈ ಯೋಜನೆಗಾಗಿ ಇಲ್ಲಿಯವರೆಗೆ ಖರ್ಚು ಮಾಡಿದೆ. ಮುಂದಿನ 6 ತಿಂಗಳುಗಳಲ್ಲಿ 80,000 ಕೋಟಿ ರೂಪಾಯಿಗಳನ್ನು ಯೋಜನೆಗೆ ಖರ್ಚು ಮಾಡಲಾಗುವುದು.