ಗೋವಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮೋದ್ ಸಾವಂತ್
ಪಣಜಿ: ಸ್ಪಷ್ಟ ಬಹುಮತದೊಂದಿಗೆ ಗೋವಾದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಮೋದ್ ಸಾವಂತ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮಾಣವಚನ ಭೋದಿಸಿರು. ಸಾವಂತ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡನಾವಿಸ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.