ನಾಳೆ ತುಮಕೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ , ಸಿದ್ದಗಂಗಾ ಮಠಕ್ಕೆ ಬೇಟಿ
ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಏಪ್ರಿಲ್ 1 ರಂದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ತುಮಕೂರಿನ ಪ್ರಮುಖ ಧಾರ್ಮಿಕ ಸಂಸ್ಥೆಯಾದ ಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮಿಗಳ 115ನೇ ಜಯಂತ್ಯುತ್ಸವದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಇದರ ಬೆನ್ನಲ್ಲೇ ಮಧ್ಯಾಹ್ನ ಗೃಹ ಸಚಿವರು ರಾಜ್ಯ ಸಹಕಾರಿ ಇಲಾಖೆ ಆಯೋಜಿಸಿರುವ ಸಹಕಾರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಅವರು ನಂದಿನಿ ಕ್ಷೀರ ಅಭಿವೃದ್ಧಿ ಬ್ಯಾಂಕ್‌ನ ಲೋಗೋ ಬಿಡುಗಡೆ ಮಾಡಲಿದ್ದಾರೆ. ನಂತರ ಸಂಜೆ ಗೃಹ ಸಚಿವರು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.








