ಗುಮ್ಮಾ ಬಂದಾ – ವಿಕ್ರಾಂತ್ ರೋಣಾ ಚಿತ್ರದ ಟೀಸರ್ ರಿಲೀಸ್
ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾದ ಅದ್ದೂರಿ ಟೀಸರ್ ರಿಲೀಸ್ ಆಗಿದೆ. ಇಂದು ಬೆಳಗ್ಗೆ 9.55ಕ್ಕೆ ಟೀಸರ್ ರಿಲೀಸ್ ಮಾಡಲಾಗಿದೆ. ಹಲವು ಭಾಷೆಯ ಸ್ಟಾರ್ ನಟರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಮಾಡಿದ್ದಾರೆ.
ಟೀಸರ್ ಬಿಡುಗಡೆಯ ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನ ಅನಾವರಣ ಮಾಡಲಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿರುವ ಈ ಸಿನಿಮಾ ಜು.28ರಂದು ರಿಲೀಸ್ ಆಗಲಿದೆ. ‘ವಿಕ್ರಾಂತ್ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್ ಭಂಡಾರಿ ಅವರು ಆಕ್ಷನ್ ಕಟ್ ಹೇಳಿದ್ದಾರೆ.
ಜು.28ರಂದು ‘ವಿಕ್ರಾಂತ್ ರೋಣ’ ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಡಿಫರೆಂಟ್ ಗೆಟಪ್ನಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ.‘ವಿಕ್ರಾಂತ್ ರೋಣ’ ಸಿನಿಮಾ 3ಡಿ ವರ್ಷನ್ನಲ್ಲಿ ಸಿದ್ಧವಾಗಿದೆ.
ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್ ಲಾಲ್, ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಇಂಗ್ಲಿಷ್ನಲ್ಲಿ ವೀರೇಂದ್ರ ಸೆಹ್ವಾಗ್ ಅವರು ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.








