ಟ್ರ್ಯಾಕ್ಟರ್ ಟ್ರಾಲಿಗೆ ಕಾರು ಡಿಕ್ಕಿ | ನ್ಯಾಯಾದೀಶರ ಸಾವು
ಮಧ್ಯಪ್ರದೇಶ : ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನ್ಯಾಯಾದೀಶರೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲಾ ಕೇಂದ್ರದ ಸಮೀಪ ನಡೆದಿದೆ.
ರಿಷಿ ತಿವಾರಿ ಮೃತ ನ್ಯಾಯಾದೀಶರು. ಘಟನೆಯಲ್ಲಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಆಶಿಶ್ ಮಥೋರಿಯಾ ಮತ್ತು ಇವರ ಸೋದರ ಮಾವ ರಾಮ್ ದಿನಕರ್ ಎಂಬುವರು ಗಾಯಗೊಂಡಿದ್ದು, ಇವರನ್ನು ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೂವರೆ ವರ್ಷದ ಹಿಂದೆ ರಿಷಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್‌ಸಿ) ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಛತ್ತರ್‌ಪುರ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ಅವರನ್ನು ನಿಯೋಜಿಸಲಾಗಿತ್ತು.
ಶನಿವಾರ ರಾಮ್ ದಿನಕರ್ ಎಂಬಾತ ಕಾರು ಚಲಾಯಿಸುತ್ತಿದ್ದರು. ಕಾರು ವೇಗದಲ್ಲಿ ಚಲಾಯಿಸುತ್ತಿದ್ದರು. ಆಗ ಕಾರಿನ ನಿಯಂತ್ರಣ ತಪ್ಪಿ ಸಾಗರ್-ಕಾನ್ಪುರ್ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಟ್ರಾಲಿಗೆ ಗುದ್ದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ನ್ಯಾಯಾದೀಶರು ಮೃತಪಟ್ಟಿದ್ದಾರೆ. ನ್ಯಾಯಾಧೀಶರ ಸಹೋದ್ಯೋಗಿ ಮತ್ತು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ರಿಷಿ ತಿವಾರಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದ್ದು, ಸಿಧಿ ಜಿಲ್ಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.








