ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜಿವಾವಧಿ ಶಿಕ್ಷೆ
ಬೆಳಗಾವಿ: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟ ಮಾಡಿದೆ.
ಏ.4 ಸೋಮವಾರ ಬೆಳಗಾವಿಯ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ, A-2 ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, A-3 ಬೆಂಗಳೂರಿನ ಅಭಿ ಬಂಡಗಾರ್, A-4 ಉಡುಪಿಯ ಗಣೇಶ್ ಭಜಂತ್ರಿ, A-9 ಉಡುಪಿಯ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.
ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ ನಾಯಕ್ ಹತ್ಯೆಯಾಗಿತ್ತು. 3 ಕೋಟಿ ಹಫ್ತಾ ನೀಡದಿದ್ದಕ್ಕೆ ಆರ್.ಎನ್. ನಾಯಕ್ ಹತ್ಯೆ ಮಾಡಲಾಗಿತ್ತು.
2013ರ ಡಿಸೆಂಬರ್ 21 ರಂದು ಉದ್ಯಮಿ ನಾಯಕ್ ಕೊಲೆಯಾಗಿತ್ತು. ಸುಪಾರಿ ನೀಡಿ ಕೊಲೆ ಮಾಡಿಸಿದ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆ, ಬನ್ನಂಜೆ ರಾಜಾ ಸೇರಿ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.








