CSK | ಐಪಿಎಲ್ ನಲ್ಲಿ ಕೆಟ್ಟ ದಾಖಲೆ ಬರೆದ ಸಿಎಸ್ ಕೆ
ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನ ತನ್ನ ಹೆಸರಿಗೆ ಬರೆದಿಕೊಂಡಿದೆ.
ರನ್ ಗಳ ವಿಷಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತ್ಯಂತ ದೊಡ್ಡ ಮೊತ್ತದ ಅಂತರದಲ್ಲಿ ಸೋಲುಂಡಿದೆ.
2013ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 60 ರನ್ ಗಳ ಬೃಹತ್ ಅಂತರದಿಂದ ಸೋತಿದ್ದ ಸಿಎಸ್ ಕೆ 9 ವರ್ಷಗಳ ಬಳಿಕ ಮತ್ತೆ ದೊಡ್ಡ ಅಂತರದ ಸೋಲು ಕಂಡಿದೆ.
ಪಂಜಾಬ್ ವಿರುದ್ಧದ ಪಂದ್ಯದಲ್ಲಿ 181 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಜಡ್ಡು ಸೇನಾ 18 ಓವರ್‌ಗಳಲ್ಲಿ 126 ರನ್ ಗಳಿಸಿತು.
ಪಂದ್ಯದಲ್ಲಿ ಆಲ್ ರೌಂಡ್ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್, ಹಾಲಿ ಚಾಂಪಿಯನ್ ಸಿಎಸ್ ಕೆ ವಿರುದ್ಧ ಈ ಋತುವಿನಲ್ಲಿ ಎರಡನೇ ಗೆಲುವು ಸಾಧಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು.ipl-2022-csk-second-biggest-defeat









