RCB | ಆರ್ ಸಿಬಿ ತಂಡದಲ್ಲಿ ಬದಲಾವಣೆ ಆಗುತ್ತಾ..?
ಇಂದು ವಾಂಖೆಡೆ ಅಂಗಳದಲ್ಲಿ ರಾಯಲ್ಸ್ ಕಾಳಗ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ.
ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಸೋತಿದ್ದ ಆರ್ ಸಿಬಿ ತಂಡ, ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಜಯದ ಅಭಿಯಾನವನ್ನ ಮುಂದುವರೆಸಲು ಪ್ಲಾನ್ ಮಾಡಿಕೊಂಡಿದೆ.
ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಈ ಆವೃತ್ತಿಯಲ್ಲಿ ಆಡಿರುವ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನ ಅಭಿಯಾನ ಮುಂದುವರೆಸಿ. ಪಾಯಿಂಟ್ಸ್ ಟೇಬಲ್ ನಲ್ಲಿ ಮೊದಲ ಗಟ್ಟಿ ಮಾಡಿಕೊಳ್ಳಲು ಪ್ಲಾನ್ ಮಾಡಿಕೊಂಡಿದೆ.
ಸಂಭಾವ್ಯ ತಂಡ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (c & wk), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ನವದೀಪ್ ಸೈನಿ, ರವಿಚಂದ್ರನ್ ಅಶ್ವಿನ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ಸಿ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆ), ಶೆರ್ಫಾನ್ ರುದರ್ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್









