ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಸಚಿವ
ಬಣ್ಣದ ಲೋಕ ಯಾರ ಬೇಕಾದರನ್ನು ಕೈ ಬೀಸಿ ಕರೆಯುತ್ತೆ. ಆಟಗಾರರು, ರಾಜಕಾರಣಿಗಳು, ಅಧಿಕಾರಿಗಳು ಹೀಗೆ ಎಲ್ಲರನ್ನೂ ಕರೆಯುತ್ತೆ. ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಕೂಡಾ ಬಣ್ಣ ಹಚ್ಚಿದ್ದರು. ಅದು ನೈಜ ಘಟನೆಯಾದಾರಿತ ಚಿತ್ರವಾದ “ತನುಜಾ” ಚಿತ್ರಕ್ಕೆ.
ಯಡಿಯೂರಪ್ಪನವರೊಂದಿಗೆ, ಹಿರಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಕೂಡಾ ಬಣ್ಣ ಹಚ್ಚಿದ್ದರು. ಈಗ ಮತ್ತೊಬ್ಬ ರಾಜಕಾರಣಿ ಕೂಡ ಬಣ್ಣ ಹಚ್ಚಿದ್ದಾರೆ. ಅದು ಇದೇ ತನುಜಾ ಚಿತ್ರದಲ್ಲಿ ಎಂಬುವುದು ಗಮನಾರ್ಹ. ತನುಜಾ ಚಿತ್ರವು ತನುಜಾ ಎಂಬ ಹೆಣ್ಣುಮಗಳ ಜೀವನದಲ್ಲಿ ನಡೆದ ಘಟನೆ ಕುರಿತು ಚಿತ್ರವಾಗಿದೆ.
ಅದು ತನುಜಾ ಕೊರೊನಾ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಸಚಿವ ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು.
ಈ ಘಟನೆಯಾಧರಿಸಿ ರಾಜ್ಯಪ್ರಶಸ್ತಿ ವಿಜೇತ ವಿಜೇತ ಹರೀಶ್ ಎಂ.ಡಿ ಹಳ್ಳಿ ಚಿತ್ರ ಮಾಡುತ್ತಿದ್ದಾರೆ. ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ತನುಜಾ ಚಿತ್ರದಲ್ಲಿ ವೈದ್ಯಕೀಯ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಇಂದು ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದು ವಿಶೇಷವಾಗಿದ್ದು ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ.
ಇನ್ನೂ ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್ ,ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಅಭಿನಯಿಸಿದ್ದಾರೆ.