ಬೆಂಗಳೂರು : ರಾಜ್ಯದ 13 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಲೇಜುಗಳೇ ಇಲ್ಲ ಎಂಬ ಮಾಹಿತಿ ಹೊರ ಬಿದ್ದಿದೆ. ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದಿವೆ. ದೇಶದಲ್ಲಿ ಕಡ್ಡಾಯ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿದೆ. ಆದರೂ ಸಹ ಕರ್ನಾಟಕದಂತ ರಾಜ್ಯದಲ್ಲಿ ಸರ್ಕಾರಿ ಕಾಲೇಜುಗಳು ಎಂಬುದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿರುವ ಸರಿಸುಮಾರ 13 ವಿಧಾನಸಭಾ ಕ್ಷೇತ್ರಗಳ ಸರ್ಕಾರಿ ಕಾಲೇಜುಗಳು ಇಲ್ಲ. ಇನ್ನೂಳಿದ ಕೆಲ ಕಡೆಗಳಲ್ಲಿ ಹೆಚ್ಚು ಕಾಲೇಜುಗಳಿರುವುದು ಕಂಡು ಬಂದಿದೆ. ಹಾಗಾಗಿ ಹೆಚ್ಚುವರಿ ಇರುವ ಕಾಲೇಜುಗಳನ್ನು ಕಾಲೇಜುಗಳು ಇಲ್ಲದ ಸ್ಥಳಕ್ಕೆ ಸ್ಥಳಾಂತರ ಮಾಡಲು ಸರ್ಕಾರ ಚಿಂತನೆ ನಡೆಸಿದೆ.
ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಸಭೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ, ರಾಜ್ಯದಲ್ಲಿರುವ 13 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಕಾಲೇಜುಗಳು ಇಲ್ಲದೇ ಇರುವುದನ್ನು ಗುರುತಿಸಲಾಗಿದೆ. ಆದ್ದರಿಂದ ಹೆಚ್ಚುವರಿ ಕಾಲೇಜುಗಳು ಇರುವ ಕ್ಷೇತ್ರಗಳಿಂದ 6 ಪ್ರಥಮ ದರ್ಜೆ ಕಾಲೇಜುಗಳನ್ನ ಕಾಲೇಜುಗಳು ಇಲ್ಲದ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.








