IPL 2022 | ಐಪಿಎಲ್ ನ ಪ್ರಮುಖ ಸುದ್ದಿಗಳು
1 ಐಪಿಎಲ್-2022ರಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡುತ್ತಿದೆ. ಮುಂಬೈ ಈ ಋತುವಿನಲ್ಲಿ ಸತತ ಮೂರು ಪಂದ್ಯಗಳ ಸೋಲಿನ ಅವಮಾನದಿಂದ ತತ್ತರಿಸಿದೆ. ಮುಂಬೈ ತಂಡ ಬ್ಯಾಟಿಂಗ್ ನಲ್ಲಿ ಮಿಂಚುತ್ತಿದ್ದರೂ ಪೇಸ್ ಬೌಲಿಂಗ್ ನಲ್ಲಿ ಮಿಂಚುತ್ತಿಲ್ಲ. ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ ಉಳಿದೆಲ್ಲ ಬೌಲರ್‌ಗಳು ರನ್‌ಗಳನ್ನು ಬಿಟ್ಟುಕೊಡುತ್ತಿದ್ದಾರೆ. ಇದೇ ವಿಚಾರವಾಗಿ ಭಾರತ ತಂಡದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಪ್ರತಿಕ್ರಿಯೆ ನೀಡಿದ್ದಾರೆ. ಮುಂಬೈ ಅಂತಿಮ ತಂಡದಲ್ಲಿ ಜಯದೇವ್ ಉನದ್ಕತ್ ಅವರನ್ನು ಸೇರಿಸಿಕೊಳ್ಳುವಂತೆ ಸೆಹ್ವಾಗ್ ಸಲಹೆ ನೀಡಿದ್ದಾರೆ.
2 ಸತತ ಸೋಲಿನಿಂದ ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆ ಮತ್ತೊಂದು ಭಾರಿ ಆಘಾತ ಎದುರಾಗಿದೆ. ನಿಧಾನಗತಿಯ ಬೌಲಿಂಗ್ ನಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರಿಗೆ ಐಪಿಎಲ್ ಆಯೋಜಕರು ದಂಡ ವಿಧಿಸಿದ್ದಾರೆ. ನಿಗದಿತ ಸಮಯದೊಳಗೆ ಬೌಲಿಂಗ್ ಕೋಟಾವನ್ನು ಪೂರ್ಣಗೊಳಿಸದ ಕಾರಣ ಪಂತ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಿದ್ದಾರೆ. ಈ ಕುರಿತು ಅಧಿಕೃತ ಹೇಳಿಕೆ ಹೊರಬಿದ್ದಿದೆ.
3 ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತಿದ್ದು, ಡಿಸಿ ಕ್ಯಾಪ್ಟನ್ ರಿಷಬ್ ಪಂತ್ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗ ವಾಸೀಂ ಜಾಫರ್ ಟೀಕೆ ಮಾಡಿದ್ದಾರೆ. ರಿಷಬ್ ಪಂತ್ ತಂಡದ ಪ್ರಮುಖ ಬೌಲರ್ ಅಕ್ಷರ್ ಪಟೇಲ್ ಅವರ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ. ಅಕ್ಷರ್ ಪಟೇಲ್ ಅವರನ್ನು ಕಡೆಗಣಿಸಿ ಲಲಿತ್ ಯಾದವ್ ಅವರನ್ನ ಬೌಲಿಂಗ್ ದಾಳಿಗೆ ಇಳಿಸಿದ್ದು, ಪಂದ್ಯದ ಮೇಲೆ ಪರಿಣಾಮ ಬೀರಿದೆ. ಇಲ್ಲಿ ಡೆಲ್ಲಿ ನಾಯಕನ ತಂತ್ರಗಾರಿಕೆಯ ತಪ್ಪು ಎಂದು ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
4 ನಾನು ಡೇವಿಡ್ ವಾರ್ನರ್ ಬ್ಯಾಟಿಂಗ್ ಗೆ ದೊಡ್ಡ ಅಭಿಮಾನಿ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಪೃಥ್ವಿ ಶಾ ಹೇಳಿದ್ದಾರೆ. IPL-2022 ರ ಅಂಗವಾಗಿ ಗುರುವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್‌ಗಳಿಂದ ಸೋತಿದೆ. ಈ ಪಂದ್ಯದಲ್ಲಿ ಡೆಲ್ಲಿ ಸೋಲು ಕಂಡರೂ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಪೃಥ್ವಿ ಶಾ ಕೇವಲ 34 ಎಸೆತಗಳಲ್ಲಿ 61 ರನ್ ಗಳಿಸಿದರು.










