ದೇಶದೆಲ್ಲೆಡೆ ಸಿಎಎ ಮತ್ತು ಎನ್.ಪಿ.ಆರ್ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ಬಿಜೆಪಿ ಆಡಳಿತವಿರುವ ತ್ರಿಪುರಾ ರಾಜ್ಯ ಸೈಲೆಂಟಾಗಿ ಎನ್.ಪಿ.ಆರ್ ಘೋಷಣೆ ಮಾಡಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಜಾರಿಗೊಳಿಸಲು ಸಿದ್ದವಾದ ರಾಜ್ಯ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಇದಾಗಲೇ ತ್ರಿಪುರಾದಲ್ಲಿ ಎನ್ಪಿಆರ್ ತಯಾರಿಸಲು ಅಗತ್ಯವಾದ ದತ್ತಾಂಶವನ್ನು ಸಂಗ್ರಹಕ್ಕೆ ಸಿದ್ದತೆ ನಡೆದಿದೆ, ಮೇ 16 ರಂದು ಮೊದಲ ಹಂತದ ಕೆಲಸಗಳು ಪ್ರಾರಂಭಗೊಳ್ಳಲಿದ್ದು, ಜೂನ್ 30 ರಂದು ಮುಕ್ತಾಯಗೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ಆ್ಯಪ್ ಮೂಲಕ ಡೇಟಾವನ್ನು ಸಂಗ್ರಹಿಸಲು ರಾಜ್ಯಾದ್ಯಂತ 11,000 ಅಧಿಕಾರಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈ ಅಧಿಕಾರಿಗಳು ಜನಸಂಖ್ಯಾ ಪಟ್ಟಿ & ಬಯೋಮೆಟ್ರಿಕ್ ವಿವರಗಳೊಂದಿಗೆ ಪ್ರತಿಯೊಬ್ಬರ ಡೇಟಾಬೇಸ್ ಅನ್ನು ಕಲೆಹಾಕುವ ಕೆಲಸ ಮಾಡಲಿದ್ದಾರೆ.
ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...








