ರೈತು ಬಲೀಷ್ಠವಾದಷ್ಟು ನವ ಭಾರತ ಸಮೃದ್ಧ : ಪಿಎಂ ಮೋದಿ
ನವದೆಹಲಿ: ರೈತರು ಬಲೀಷ್ಠವಾದಷ್ಟು ನವ ಭಾರತ ಸಮೃದ್ಧವಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಟ್ವೀಟ್ ಮಾಡಿದ ಪ್ರಧಾನಿ ಮೋದಿ ಅವರು ನಮ್ಮ ರೈತ ಸಹೋದರ ಸಹೋದರಿಯರ ಬಗ್ಗೆ ದೇಶ ಹೆಮ್ಮೆಪಡುತ್ತದೆ. ಅವರು ಬಲಿಷ್ಠರಾಗಿದಷ್ಟು, ನವ ಭಾರತವು ಹೆಚ್ಚು ಸಮೃದ್ಧವಾಗಿರುತ್ತದೆ ಎಂದು ಹೇಳಿದರು.
हमारे किसान भाई-बहनों पर देश को गर्व है। ये जितना सशक्त होंगे, नया भारत भी उतना ही समृद्ध होगा। मुझे खुशी है कि पीएम किसान सम्मान निधि और कृषि से जुड़ी अन्य योजनाएं देश के करोड़ों किसानों को नई ताकत दे रही हैं। pic.twitter.com/xMSrBrbLT5
— Narendra Modi (@narendramodi) April 10, 2022
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿರುವುದು ನನಗೆ ಖುಷಿ ತಂದಿದೆ ಎಂದರು.
11.3 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 1.82 ಲಕ್ಷ ಕೋಟಿ ರೂ.ವನ್ನು ನೇರವಾಗಿ ವರ್ಗಾಯಿಸಲಾಗಿದೆ ಎಂದು ಹೇಳುವ ಗ್ರಾಫಿಕ್ ಅನ್ನು ಪ್ರಧಾನಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.








