RCB | ಯಾರು ಈ ಅನೂಜ್ ರಾವತ್..!!
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ ಸಿಬಿ ಆರಂಭಿಕ ಆಟಗಾರ ಅನೂಜ್ ರಾವತ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರು ಮುಂಬೈ ವಿರುದ್ಧ 47 ಎಸೆತಗಳಲ್ಲಿ 66 ರನ್ ಗಳಿಸಿ ಆರ್ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿಯ ಮೆಗಾ ಹರಾಜಿನಲ್ಲಿ ಅನೂಜ್ ರಾವತ್ ಗೆ 3.4 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದೆ. ಮೂಲತಃ ಉತ್ತರಾಖಂಡದವರಾಗಿದ್ದು, ದೆಹಲಿ ಪರ ದೇಶಿಯ ಕ್ರಿಕೆಟ್ ಆಡುತ್ತಿದ್ದಾರೆ.
ಯಾರು ಈ ಅನೂಜ್..?
ಅನುಜ್ ರಾವತ್ ಉತ್ತರಾಖಂಡದ ರಾಮನಗರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದರು. ರಾವತ್ ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಒಲವು ಹೊಂದಿದ್ದರು. ಆದರೆ, ರಾಮನಗರದಲ್ಲಿ ಕ್ರಿಕೆಟ್ ಅಕಾಡೆಮಿಗಳು ಇಲ್ಲದ ಕಾರಣ ತಂದೆ ದೆಹಲಿಗೆ ಕಳುಹಿಸಿದ್ದರು. ಅಕ್ಟೋಬರ್ 2017 ರಲ್ಲಿ, ಅನುಜ್ ರಾವತ್ ದೆಹಲಿಗಾಗಿ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದರು. ಅಂದಿನಿಂದ ರಾವತ್ ದೇಶೀಯ ಕ್ರಿಕೆಟ್‌ನಲ್ಲಿ ಮಿಂಚಿದ್ದಾರೆ.
ಅವರು ತಮ್ಮ ಮೊದಲ ಎರಡು ರಣಜಿ ಪಂದ್ಯಗಳಲ್ಲಿ ಅರ್ಧಶತಕಗಳನ್ನು ಗಳಿಸಿದರು. ಅದೇ ರೀತಿ, 2018 ರ ರಣಜಿ ಋತುವಿನಲ್ಲಿ ಮಧ್ಯಪ್ರದೇಶ ವಿರುದ್ಧ ರಾವತ್ ಅದ್ಭುತ ಶತಕ ಗಳಿಸಿದ್ದರು.ರಾವತ್ ಅವರು ಇತ್ತೀಚೆಗೆ ನಡೆದ ಸೈಯದ್ ಮುಸ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅನುಜ್ ರಾವತ್ IPL 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದರು.
rcb-ipl-2022-who-is anuj-rawat









