ಬಾಗಲಕೋಟೆ : ರಾಜ್ಯದಲ್ಲಿ ಕೊರೊನಾ ತನ್ನ ಕಂದಬಭಾಹುಗಳನ್ನು ಚಾಚುತ್ತಲೇ ಇದೆ. ಆದರೂ ಸಹ ಬಾಗಲಕೋಟೆ ಜಿಲ್ಲೆಯ ಕೆಲವರಿಗೆ ಕೊರೊನಾ ಸೋಂಕಿನ ಬಗ್ಗೆ ಗಂಭೀರತೆ ಇಲ್ಲದಾಗಿದೆ. 4.0 ಲಾಕ್ ಡೌನ್ ಸಡಿಲಗೊಂಡರೂ ಬೇರೆ ರಾಜ್ಯಗಳಿಂದ ಬಂದವರು ಕಡ್ಡಾಯವಾಗಿ ಕ್ವಾರೆಂಟೈನ್ ಮಾಡಬೇಕು. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಕ್ವಾರಂಟೈನ್ ನಿಯಮವನ್ನು ಗಾಳಿ ತೂರಲಾಗಿದೆ. ನಿಯಮವನ್ನು ಮೀರಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಹಾಗಾಗಿ 8 ಜನರನ್ನು ಹೋಮ್ ಕ್ವಾರಂಟೈನ್ ನಿಂದ ಸಾಂಸ್ಥಿಕ ಕ್ವಾರಂಟೈನ್ ಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ನಗರದ ಐವರು, ಬಾದಾಮಿ ಪಟ್ಟಣದ ಮೂವರಿಂದ ನಿಯಮ ಉಲ್ಲಂಘನೆ ಆಗಿದೆ. ಆದ್ದರಿಂದ ಅವರನ್ನು ಸಾಂಸ್ಥಿಕ ಕ್ವಾರಂಟೈನ್ ವರ್ಗಾವಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಕೆ.ರಾಜೇಂದ್ರ ತಿಳಿಸಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








