Santosh patil death case | ಈಶ್ವರಪ್ಪ ರಾಜೀನಾಮೆಗೆ ಆಗ್ರಹ : ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯ ಕಾಂಗ್ರೆಸ್ ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.
ಗುತ್ತೆಗೆದಾರ ಸಂತೋಷ್ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರು ಉಲ್ಲೇಖಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕ್ಕೆ ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ.
ಅಲ್ಲದೆ ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಲಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಲಿದ್ದಾರೆ.
ಇನ್ನು ಇದಲ್ಲದೇ ಇಂದು ಈಶ್ವರಪ್ಪ ರಾಜೀನಾಮೆಗೆ ರಾಜ್ಯದಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದ ಎದುರು ಕೂಡ ಕಾಂಗ್ರೆಸ್ ಪ್ರತಿಭಟಿಸಲಿದೆ. contractor-santosh-patil-death-case congress protest









