Santosh patil death case | ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್
ಉಡುಪಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂರೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಉಡುಪಿ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಮೃತ ಸಂತೋಷ್ ಸಹೋದರ ಪ್ರಶಾಂತ್ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಸಂತೋಷ್ ಸಾವಿಗೆ ಕಮಿಷನ್ ಕಾಟವೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಅಲ್ಲದೇ ಬಿಲ್ ಮಂಜೂರು ಮಾಡಲು 40% ಕಮಿಷನ್ ಕೇಳಿದ್ದಾಗಿ ಆರೋಪಿಸಿ ಈಶ್ವರಪ್ಪ, ಬಸವರಾಜ್, ರಮೇಶ್ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. santosh-patil-death-case-fir-against-ks-eshwarappa









