ಬೆಂಗಳೂರು : ರಾಜ್ಯದ 50 ದೇವಸ್ಥಾನಗಳಿಗೆ ಆನ್ ಲೈನ್ ಬುಕ್ಕಿಂಗ್ ಸೇವೆಯನ್ನು ವಿಸ್ತರಣೆ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಜರಾಯಿ ಮತ್ತು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, 50 ದೇವಸ್ಥಾನಗಳಿಗೆ ಆನ್ ಲೈನ್ ಬುಕ್ಕಿಂಗ್ ಸೇವೆಯನ್ನು ವಿಸ್ತರಣೆ ಮಾಡಬೇಕು. ಜೊತೆಗೆ 50 ಜನರಿಗೆ ಸೀಮಿತಗೊಳಿಸಿ ಸರಳ ಮದುವೆ ಮಾಡಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ. ಅಂಧ್ರಪ್ರದೇಶದ ತಿರುಮಲ ಕರ್ನಾಟಕ ಛತ್ರಕ್ಕೆ ಸೇರಿದ ಸ್ಥಳಗಳಲ್ಲಿ ನೂತನ ವಸತಿ ಗೃಹಗಳ ನಿರ್ಮಾಣಕ್ಕೆ 200 ಕೋಟಿ ಅನುದಾನ ಮಂಜೂರು ಮಾಡಲಾಗುವುದು. ಹಾಗಾಗಿ ಆ ಕಾರ್ಯಗಳಿಗೆ ಚಾಲನೆ ನೀಡಬೇಕು.
ಇದೇ ವೇಳೆ ಕಾಮಗಾರಿಯ ಅಂದಾಜು ವೆಚ್ಚ ಮತ್ತು ಕೊಠಡಿಗಳ ಅಳತೆಯನ್ನು ಮರು ಪರಿಶೀನೆ ನಡೆಸಬೇಕು ಎಂದು ಬಿಎಸ್ ವೈ ಅಧಿಕಾರಿಗಳಿಗೆ ಹೇಳಿದ್ದಾರೆ. ಅನುಭವ ಮಂಟಪ ಸ್ಥಾಪನೆಗೆ 100 ಕೋಟಿ ರೂಪಾಯಿಗಳು ನೀಡಲಾಗುತ್ತದೆ. 164 ತಾಲ್ಲೂಕುಗಳಲ್ಲಿ ಭೂ ನ್ಯಾಯ ಮಂಡಳಿ ರಚಿಸಬೇಕು.
ಇನ್ನೂ ಡ್ರೋನ್ ಆಧಾರಿತ ಸರ್ವೆ ಸಮಿತ್ವ ಯೋಜನೆಯಡಿ 1600 ಗ್ರಾಮಗಳನ್ನು ಗುರುತಿಸಲಾಗಿದೆ. ಈ ಯೋಜನೆಯಲ್ಲಿ ಗ್ರಾಮದಲ್ಲಿ ವಾಸು ಮಾಡುವ ನಿವಾಸಿಗಳಿಗೆ ಅವರ ವಾಸಸ್ಥಳದ ಆಸ್ತಿಗಳಿಗೆಗಾಗಿ ಪ್ರಾಪರ್ಟಿ ಕಾರ್ಡ್ ಕೊಡುವ ವ್ಯವಸ್ಥೆ ಮಾಡಲಾಗಿದೆ. ಈ ಯೋಜನೆ ದೇಶದ ಆರು ರಾಜ್ಯಗಳಲ್ಲಿ ಜಾರಿಯಾಗಿದೆ. ಇದೀಗ ಕರ್ನಾಟಕ ರಾಜ್ಯದಲ್ಲೂ ಜಾರಿಯಾಗುತ್ತಿದೆ. ಹಾಗಾಗಿ ಈ ಕೆಲಸ ಬೇಗ ಶುರುವಾಗಬೇಕು.
ಅಲ್ಲದೆ ಸಭೆಯಲ್ಲಿ ಮಹತ್ವವಾದ ಅಂಶವೊಂದು ಚರ್ಚೆಯಾಗಿದೆ. ಕೋವಿಡ್ 19 ಹಿನ್ನೆಲೆಯಲ್ಲಿ 2020-21 ಸಾಲಿನಲ್ಲಿ 3524 ಕೋಟಿಗಳಷ್ಟು ಕಡಿಮೆ ರಾಜಸ್ವ ಸಂಗ್ರವಾಗಬಹುದೇಮದು ಅಂದಾಜು ಮಾಡಲಾಗಿದೆ. ಅಲ್ಲದೆ ಕೈಗೆಟುಕುವ ದರಗಳ ಮನೆಗಳನ್ನು ಪ್ರೋತ್ಸಾಹಿಸಲು 20 ಲಕ್ಷ ಮೌಲ್ಯದ ಅಪಾರ್ಟ್ ಮೆಂಟ್ ಗಳು ಮೊದಲ ನೊಂದಣಿ ಶುಲ್ಕವನ್ನು ಮೂಲಕ ಶೇ 5 ರಿಂದ 2 ಕ್ಕೆ ಇಳಿಸಲು ಹಾಗೂ 35 ಲಕ್ಷ ಲಕ್ಷದ ಮೌಲ್ಯದವರಿಗಿನ ನೋಂದಣಿಗೆ ಶೇ 5 ರಿಂದ ಶೇ 3 ಇಳಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನೂ ಸಭೆಯಲ್ಲಿ ಮಾತನಾಡಿದ ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯದ 52 ಆಯ್ದ ದೇವಸ್ಥಾನಗಳಲ್ಲಿ ಸೇವೆಗಳ ಆನ್ ಲೈನ್ ಬುಕ್ಕಿಂಗ್ ಯೋಜನೆಯ ಆ್ಯಪ್ ಅನ್ನು ಸಿದ್ದಪಡಿಸಲಾಗಿದೆ. www.pureprayer.com ಎಂಬ ವೈಬ್ ಸೈಟ್ ಮೂಲಕ ದೇವಸ್ಥಾಗಳ ಸೇವೆ ಪಡೆಯಬಹುದು ಎಂದು ಹೇಳಿದ್ದಾರೆ.








