ಕರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳ – ಕಳೆದ 24 ಗಂಟೆಯಲ್ಲಿ 949 ಹೊಸ ಕೇಸ್
ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕಿತರ ಸಂಖ್ಯೆ 949 ಕ್ಕೆ ಇಳಿದಿದ್ದರೂ, ಕಳೆದ ಎರಡು ದಿನಗಳಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾಗಿದೆ. ಆರು ಜನರು ಕರೋನಾದಿಂದಾಗಿ ಸಾವನ್ನಪ್ಪಿದ್ದಾರೆ.
ಇದೀಗ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 4,30,39,972ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,191 ಕ್ಕೆ ಏರಿದೆ. ಅದೇ ಸಮಯದಲ್ಲಿ, ಒಟ್ಟು ಸಾವಿನ ಸಂಖ್ಯೆ 5,21,743 ಕ್ಕೆ ಏರಿದೆ. ಶುಕ್ರವಾರ ಬೆಳಿಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿಯ ಪ್ರಕಾರ, ದೇಶದಲ್ಲಿ ಸಕ್ರಿಯ ಪ್ರಕರಣಗಳು ಒಟ್ಟು ಸೋಂಕಿತರಲ್ಲಿ ಶೇಕಡಾ 0.03 ರಷ್ಟಿದ್ದರೆ, ಚೇತರಿಕೆಯ ಪ್ರಮಾಣ ಶೇಕಡಾ 98.76 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳಲ್ಲಿ 133 ಹೆಚ್ಚಳವಾಗಿದೆ.
ಸಚಿವಾಲಯದ ಪ್ರಕಾರ, ದೈನಂದಿನ ಪಾಸಿಟಿವಿಟಿ ದರವು 0.26% ಮತ್ತು ವಾರದ ಪಾಸಿಟಿವಿಟಿ ದರವು 0.25% ಆಗಿದೆ. ಕರೋನಾದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,07,038 ಕ್ಕೆ ಏರಿದೆ. ಮರಣ ಪ್ರಮಾಣ 1.21%.
ದೇಶದಲ್ಲಿ ಲಸಿಕೆ ಅಭಿಯಾನ ಮುಂದುವರೆಯುತ್ತಿದ್ದು, ಇದುವರೆಗೆ 186.30 ಕೋಟಿ ಡೋಸ್ ನೀಡಲಾಗಿದೆ. 12 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆಗಳನ್ನು ನೀಡಲಾಗುತ್ತಿದೆ. ಇತ್ತೀಚೆಗೆ, ಎರಡು ಲಸಿಕೆಗಳನ್ನು ಪಡೆದ ವಯಸ್ಕರಿಗೆ ಬೂಸ್ಟರ್ ಡೋಸ್‌ಗಳನ್ನ ನೀಡಲು ಸರ್ಕಾರವು ಅನುಮತಿಸಿದೆ.








