ಇನ್ನೂ 3 ದಿನಗಳ ಕಾಲ ರಾಜ್ಯದಂತ ಮಳೆ ಸಾಧ್ಯತೆ- ಹವಮಾನ ಇಲಾಖೆ
ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಬಾರಿ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯಲಿದೆ.
ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಸಂಜೆ ವೇಳೆ ಭಾರೀ ಮಳೆ ಹಾಗೂ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ನಿನ್ನೆ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಮರಗಳು ಧರೆಗುರುಳಿದ್ದರು ಚರಂಡಿಗಳು ಬ್ಲಾಕ್ ಆಗಿ ಮೋರಿಗೆ ಹರಿಯಬೇಕಿದ್ದ ನೀರು ಮನೆ ಒಳಗಡೆ ಹರಿದಿದೆ. ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಕವಿಯುವ ಸಾಧ್ಯತೆಯಿದ್ದು, ಹಗುರವಾದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








