ಪ್ರಚೋದನಕಾರಿ ಭಾಷಣ ಮಾಡಿದ ಶ್ರೀ ರಾಮ ಸೇನೆ ಮುಖಂಡನ ಬಂಧನ
ರಾಯಚೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮ ಸೇನೆ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಶ್ರೀ ರಾಮ ಸೇನೆಯ ಮುಖಂಡ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ ಭಾವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ರಾಯಚೂರು ನಗರದ ಶ್ರೀರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಶ್ರೀ ರಾಮ ನವಮಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇದಿಕೆ ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಬದಲಾಗಿ, ಲವ್ ಕೇಸರಿ ಶುರು ಮಾಡುವಂತೆ ಇವರು ಕರೆ ನೀಡಿದ್ದರು ಎನ್ನಲಾಗುತ್ತಿದೆ.
ಅಲ್ಲದೇ ಕೋಮು ಪ್ರಚೋದನೆ ಭಾಷಣ ಮಾಡುವ ಜತೆಗೆ ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶಿಸಿದ ಆರೋಪ ಇವರ ಮೇಲಿದೆ.









