ಡಿ.ಕೆ ಶಿವಕುಮಾರ ಮತ್ತು ಸಿದ್ಧರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ವಿಕ್ಷಪಕ್ಷ ನಾಯಕ ಸಿದ್ಧರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನಾಯಕರನ್ನು ಒಳಗೊಂಡಂತೆ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದೆ. ಏಪ್ರಿಲ್ 13ರಂದು ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಮುಂದಾಗಿದ್ದರು. ಹೀಗಾಗಿ ಎಫ್ ಐಆರ್ ದಾಖಲಾಗಿದೆ.
Bengaluru | FIR filed at High Grounds Police Station against 36 Congress members incl former CM Siddaramaiah, DK Shivakumar Randeep Singh Surjewala and others under sections 341,143 IPC & 103 KP Act, for unlawful assembly at Chief Minister's Race Course Road residence on April 13
— ANI (@ANI) April 18, 2022
ಅಲ್ಲದೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 36 ಜನರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 103 ಐಪಿಸಿ ಸೆಕ್ಷನ್ 341, 143ರ ಅಡಿ ಎಫ್ ಐಆರ್ ದಾಖಲಿಸಲಾಗಿದೆ.