ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DR K Sudakar | ಸರ್ಕಾರದ ವರ್ಚಸ್ಸಿಗೆ  ಮಸಿ ಬಳೆಯಲು ಸಾಮಾಜಿಕ ಜಾಲತಾಣಗಳ ದುರ್ಬಳಕೆ

Mahesh M Dhandu by Mahesh M Dhandu
April 18, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

DR K Sudakar | ಸರ್ಕಾರದ ವರ್ಚಸ್ಸಿಗೆ  ಮಸಿ ಬಳೆಯಲು ಸಾಮಾಜಿಕ ಜಾಲತಾಣಗಳ ದುರ್ಬಳಕೆ

ಬೆಂಗಳೂರು :  ಸರ್ಕಾರದ ವರ್ಚಸ್ಸಿಗೆ ಮಸಿ ಬಳೆಯಲು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಪಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಸುಧಾಕರ್ ಕಿಡಿಕಾರಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಸುಧಾಕರ್ ತಮ್ಮ ಟ್ವೀಟ್ ನಲ್ಲಿ.. ಇತ್ತೀಚೆಗೆ ಸುಳ್ಳುಗಳ ಕಂತೆಯನ್ನೇ ಸತ್ಯ ಎಂದು ಬಿಂಬಿಸುವ ರಾಜಕೀಯ ದೊಂಬರಾಟ ರಾಜ್ಯದಲ್ಲಿ ನಡೆಯುತ್ತಿದೆ. ಆಧಾರ ರಹಿತ, ದಾಖಲೆಗಳೇ ಇಲ್ಲದ ಆರೋಪಗಳ ಮೂಲಕ ಸರ್ಕಾರದ ವರ್ಚಸ್ಸಿಗೆ  ಮಸಿ ಬಳೆಯುವ ಮತ್ತು ಸಚಿವರ ತೇಜೋವಧೆ ಮಾಡುವ ಹುನ್ನಾರ ನಡೆದಿದೆ.

ಇದಕ್ಕಾಗಿ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆರ್‌ಟಿಐ ಕಾರ್ಯಕರ್ತರ ಸೋಗಿನಲ್ಲಿರುವ ಕೆಲವರ ಮೂಲಕ ದೂರುಗಳನ್ನು ಕೊಡಿಸಿ ದೊಡ್ಡ ಹಗರಣ, ಭ್ರಷ್ಟಾಚಾರ ನಡೆದಿದೆ ಎಂದು ಬಿಂಬಿಸುವ ಕಸರತ್ತು ನಡೆಯುತ್ತಿದೆ.

https://twitter.com/mla_sudhakar/status/1515908975325491200?s=20&t=Pg8F9_DmVkO7DWbV9BIRww

ಇವರ ಆರೋಪಗಳಲ್ಲಿ ಸತ್ಯಾಂಶ ಇದ್ದಲ್ಲಿ, ದಾಖಲೆಗಳು ಇದ್ದಲ್ಲಿ ಎಸಿಬಿ, ಲೋಕಾಯುಕ್ತ ಇಲ್ಲವೇ ಕೋರ್ಟ್‌ಗಳಿಗೆ ದೂರು ನೀಡಬಹುದು. ಆದರೆ ಇವರಿಗೆ ಸತ್ಯ ಬೇಕಾಗಿಲ್ಲ. ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುವುದು ಇವರ ಏಕೈಕ ಉದ್ದೇಶ. ರಚನಾತ್ಮಕ ಪ್ರತಿಪಕ್ಷವಾಗಿ ವಿಫಲರಾಗಿರುವ ಕಾಂಗ್ರೆಸ್‌ ನಾಯಕರ ಕುತಂತ್ರ ರಾಜಕಾರಣ ಇದು.  ಪ್ರತಿಭಟನೆ ಹೆಸರಿನಲ್ಲಿ ಪ್ರತಿದಿನ ಬೀದಿ ನಾಟಕ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹಿಂದೆ ಇವರು ಅಧಿಕಾರದಲ್ಲಿದ್ದಾಗ ಹಗರಣಗಳ ಕೆಸರಿನಲ್ಲೇ ಮುಳುಗಿ ಹೋಗಿದ್ದರು. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ಈಗ ಬೇರೆಯವರ ತಟ್ಟೆಯಲ್ಲಿ ನೋಣ ಹುಡುಕುವ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ.

ಬಿಜೆಪಿ ಸರರ್ಕಾರ ಬಂದು ಮೂರು ವರ್ಷ ಕಾಂಗ್ರೆಸ್ ನಾಯಕರು ನಿದ್ರಾವಸ್ಥೆಯಲ್ಲಿದ್ದರು. ಚುನಾವಣೆಗೆ ಇನ್ನೇನು ಒಂದು ವರ್ಷ ಇದೆ ಅನ್ನುವಾಗ ಹೇಗಾದರೂ ಅಧಿಕಾರಕ್ಕೆ ಬರಬೇಕು ಎಂದು ಇಂಥ ವಾಮಮಾರ್ಗ ಹಿಡಿದಿದ್ದಾರೆ.

https://twitter.com/mla_sudhakar/status/1515908981075722246?s=20&t=Pg8F9_DmVkO7DWbV9BIRww

ಮೌಲ್ಯಾಧಾರಿತ ರಾಜಕಾರಣಕ್ಕೆ, ಆರೋಗ್ಯಕರ ಸ್ಪರ್ಧೆಗೆ ಕರ್ನಾಟಕ ದೇಶಕ್ಕೆ ಮಾದರಿಯಾಗಿತ್ತು. ಕೀಳು ಮಟ್ಟದ ಕುತಂತ್ರಿ ರಾಜಕಾರಣದ ಮೂಲಕ ಅಂತಹ ಉನ್ನತ ಪರಂಪರೆಗೆ ಕಾಂಗ್ರೆಸ್‌ ನಾಯಕರು ತಿಲಾಂಜಲಿ ಇಡುತ್ತಿದ್ದಾರೆ ಎಂದು ದೂರಿದ್ದಾರೆ.

ಒಳ್ಳೇ ಕೆಲಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲು ಕಾಂಗ್ರೆಸ್ಸಿಗರಿಗೆ ಯಾವ ನೈತಿಕತೆಯಿದೆ? ಹಗರಣಗಳ ಭೂತವನ್ನೇ ಬೆನ್ನಿಗೆ ಕಟ್ಟಿಕೊಂಡಿರುವ ಇವರ ಬಯಲಾಟವನ್ನು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇನ್ನಾದರೂ ಆತ್ಮಾವಲೋಕನ ಮಾಡಿಕೊಂಡು ರಚನಾತ್ಮಕ ಚಟುವಟಿಕೆಗಳ ಮೂಲಕ ಜನರ ಮುಂದೆ ಹೋಗಲಿ.

https://twitter.com/mla_sudhakar/status/1515908989363822594?s=20&t=Pg8F9_DmVkO7DWbV9BIRww

ಅಧಿಕಾರಕ್ಕೆ ಬಂದೆ ಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್‌ ನಾಯಕರ ಜತೆ ಕೆಲ ಹಿತಶತ್ರುಗಳು ಕೈಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲ ಮಾಹಿತಿಯಿದೆ. ಇವರ ಮುಖವಾಡಗಳನ್ನು ಕಳಚಿ ಬೆತ್ತಲು ಮಾಡುವ ದಿನ ದೂರವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಸುಧಾಕರ್ ಕಿಡಿಕಾರಿದ್ದಾರೆ. health minister dr k sudhakar slams congress

Tags: #Saaksha TVBJPCongressDr. K Sudhakar
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram