ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 13,433 ಕ್ಕೆ ಏರಿಕೆ……
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ನವೀಕರಿಸಿದ ಅಂಕಿಅಂಶಗಳ ಪ್ರಕಾರ, ಕಳೆದ ಒಂದು ದಿನದಲ್ಲಿ 2,380 ಹೊಸ ಕರೋನವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದ ಒಟ್ಟು COVID-19 ಪ್ರಕರಣಗಳ ಸಂಖ್ಯೆ 4,30,49,974 ಕ್ಕೆ ಏರಿದೆ, ಸಕ್ರಿಯ ಪ್ರಕರಣಗಳು 13,433 ಕ್ಕೆ ಏರಿದೆ.
ಕಳೆದ ದಿನ 56 ಮಂದಿ ಕರೋನಾಗೆ ಮೃತಪಟ್ಟಿದ್ದು ಒಟ್ಟು ಸಾವಿನ ಸಂಖ್ಯೆ 5,22,062 ಕ್ಕೆ ಏರಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಲಾದ ಡೇಟಾ ಪ್ರಕಾರ ತಿಳಿದು ಬಂದಿದೆ.
24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಕೇಸ್ ಗಳ ಸಂಖ್ಯೆಯಲ್ಲಿ 1,093 ಪ್ರಕರಣಗಳ ಹೆಚ್ಚಳ ದಾಖಲಾಗಿದೆ. ಸಚಿವಾಲಯದ ಪ್ರಕಾರ ದೈನಂದಿನ ಪಾಸಿಟಿವಿಟಿ ದರವು ಶೇಕಡಾ 0.53 ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರವು ಶೇಕಡಾ 0.43 ಎಂದು ದಾಖಲಾಗಿದೆ.
ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,25,14,479 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.21 ರಷ್ಟಿದೆ.
ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 187.07 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ.








