ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ನೋಟಿಸ್ ನೀಡಿರುವುದನ್ನು ರಾಜಕೀಯಗೊಳಿಸಬೇಡಿ : ಖರ್ಗೆಗೆ ಬಿಜೆಪಿ ಟಾಂಗ್

Mahesh M Dhandu by Mahesh M Dhandu
April 25, 2022
in Newsbeat, Politics, ರಾಜಕೀಯ
Corona is firm for Priyank Kharge saaksha tv
Share on FacebookShare on TwitterShare on WhatsappShare on Telegram

BJP | ನೋಟಿಸ್ ನೀಡಿರುವುದನ್ನು ರಾಜಕೀಯಗೊಳಿಸಬೇಡಿ : ಖರ್ಗೆಗೆ ಬಿಜೆಪಿ ಟಾಂಗ್

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ ಪ್ರಿಯಾಂಕ್ ಖರ್ಗೆ ಅವರ ಬಳಿ ಮಾಹಿತಿ, ದಾಖಲೆ ಇದ್ದರೆ ಅದನ್ನು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸಲ್ಲಿಸುವುದು ಅವರ ಕರ್ತವ್ಯ. ಈ ಕಾರಣಕ್ಕಾಗಿಯೇ ಪ್ರಿಯಾಂಕ್ ಅವರಿಗೆ ಸಿಐಡಿ ನೋಟಿಸ್ ನೀಡಿದೆ. ತನಿಖೆಗೆ ಸಹಕರಿಸುವುದನ್ನು ಬಿಟ್ಟು ನೋಟಿಸ್ ನೀಡಿರುವುದನ್ನು ರಾಜಕೀಯಗೊಳಿಸಬೇಡಿ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.

Related posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

July 9, 2026
ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ನೋಟೀಸ್ ನೀಡಿದ್ದು, ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿ ಕುಟುಕಿದೆ.  

ಬಿಜೆಪಿ ಟ್ವೀಟ್ ನಲ್ಲಿ.. ಪಿಎಸ್‌ಐ ನೇಮಕ ಹಗರಣ ವಿಚಾರದಲ್ಲಿ ಕಾಂಗ್ರೆಸ್ ಇಷ್ಟು ದಿನ ʼಅಟೆನ್ಷನ್ ಡೈವರ್ಟ್‌ʼ ಮಾಡುವ ಕೆಲಸ ಮಾಡುತ್ತಿತ್ತು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಈ ಕೆಲಸದ ಗುತ್ತಿಗೆ ಪಡೆದವರಂತೆ ವರ್ತಿಸಿದರು. ಆದರೆ ಈಗ ಹಗರಣದ ಬಾಲ ಇವರ ಕಾಲನ್ನೇ ಸುತ್ತಿಕೊಂಡಿದೆ. ಗಮನ ಬೇರೆಡೆ ಸೆಳೆಯಲು ಮಾಡಿದ ಪ್ರಯತ್ನವೆಲ್ಲವೂ ವ್ಯರ್ಥವಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ವಿಚಾರವನ್ನು ಮರೀಚಿಕೆಯಾಗಿಸಿದ ಕುಟುಂಬವೇ ಪಿಎಸ್‌ಐ ನೇಮಕ ಹಗರಣದಲ್ಲಿ ಭಾಗಿಯಾಗಿದೆ. ಒಂದು ಬೆರಳು ಬೇರೆಯವರತ್ತ ತೋರಿದರೆ ನಾಲ್ಕು ಬೆರಳು ತಮ್ಮತ್ತ ಇರುತ್ತದೆ ಎಂಬುದಕ್ಕೆ ಪಿಎಸ್‌ಐ ನೇಮಕ ಹಗರಣ ಜ್ವಲಂತ ಉದಾಹರಣೆಯಾಗಿದೆ. ಆರೋಪ ಮಾಡಿದವರನ್ನೇ ಹಗರಣ ಸುತ್ತಿಕೊಳ್ಳುತ್ತಿದೆ.

https://twitter.com/BJP4Karnataka/status/1518470820636803073?s=20&t=ZJ-es9cXOqvr2Kr_l2_JSg

ಪಿಎಸ್ಐ ನೇಮಕಾತಿ ಹಗರಣ ಬಯಲಾಗುವ ಮುನ್ನವೇ ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್‌ ಪ್ರಿಯಾಂಕ್ ಖರ್ಗೆ ಅವರ ಬಳಿ ಇತ್ತು.  ನೇಮಕಾತಿ ಹಗರಣ ಬಯಲಾದ ಬಳಿಕ ಆಡಿಯೋ ಕ್ಲಿಪ್ ಬಿಡುಗಡೆ ಮಾಡಲು ಕಾರಣವೇನು? ಅಕ್ರಮದ ಆರೋಪ ತಮ್ಮ ಬುಡಕ್ಕೆ ಬಂದಾಗ ವಿಷಯಾಂತರ ಮಾಡುವ ವ್ಯರ್ಥ ಪ್ರಯತ್ನವಿದು.

ಮಾಧ್ಯಮದವರ ಮುಂದೆ ಪತ್ರಿಕಾ ಗೋಷ್ಠಿ ನಡೆಸುವಾಗ ತನಿಖಾ ಅಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ, ಪೊಲೀಸರು ತನಿಖೆಗೆ ಸಹಕರಿಸುವಂತೆ ಕೇಳಿದಾಗ ಬೆಚ್ಚಿ ಬಿದ್ದಿದ್ದಾರೆ. ಮಾಧ್ಯಮದ ಮುಂದೆ ಹೋಗುವಾಗಿದ್ದ ಸಾಕ್ಷ್ಯ, ಆಡಿಯೋ ಟೇಪ್‌ ಈಗೇನಾಗಿದೆ? ನೇಮಕಾತಿ ಹಗರಣದ ತನಿಖೆ ಚುರುಕಾಗುತ್ತಿರುವಂತೆ ನಿಮ್ಮ ನೆಲ ಅಲುಗಾಡಿತೇ ಎಂದು ಕುಟುಕಿದೆ.

https://twitter.com/BJP4Karnataka/status/1518470317605535745?s=20&t=ZJ-es9cXOqvr2Kr_l2_JSg

ಪಿಎಸ್‌ಐ ನೇಮಕ ಅಕ್ರಮದಲ್ಲಿ ಹೊರ ಬೀಳುತ್ತಿರುವ ದಾಖಲೆ, ಶಾಮೀಲಾದ ವ್ಯಕ್ತಿಗಳು, ಬಂಧಿತರಾದ ವ್ಯಕ್ತಿಗಳ ಹಿನ್ನೆಲೆಯೆಲ್ಲವೂ ಕಾಂಗ್ರೆಸ್ ಪ್ರಭಾವಿ ನಾಯಕರ ನಿಕಟ ಸಂಪರ್ಕವನ್ನು ಸೂಚಿಸುತ್ತಿದೆ.ಹಗರಣದಲ್ಲಿ ಸಿಕ್ಕಿ ಬೀಳುತ್ತಿರುವ ಆರೋಪಿಗಳೆಲ್ಲರೂ ಖರ್ಗೆ ಕುಟುಂಬದ ಮನೆಯ ಸುತ್ತ ಗಿರಕಿ ಹೊಡೆಯುವವರೇ ಆಗಿದ್ದಾರೆ.

ಮಹಾಂತೇಶ್ ಪಾಟೀಲ್ ಹಾಗೂ ಅವರ ಸೋದರ ಖರ್ಗೆ ಕುಟುಂಬ ಹಾಗೂ ಕಾಂಗ್ರೆಸ್ ಜೊತೆಗೆ ಹೊಂದಿರುವ ಸಾಂಗತ್ಯದ ಬಗ್ಗೆ  ಡಿ.ಕೆ.ಶಿವಕುಮಾರ್ ಅವರು ಏಕೆ ಮೌನವಾಗಿದ್ದಾರೆ? ಪ್ರಿಯಾಂಕ ಖರ್ಗೆ ಹೇಳುತ್ತಿರುವ ದಿನಕ್ಕೊಂದು ಸುಳ್ಳು ಅಟೆನ್ಷನ್ ಡೈವರ್ಶನ್ ಮಾಡುವ ತಂತ್ರವಷ್ಟೇ ಎಂದು ಬಿಜೆಪಿ ಆರೋಪಿಸಿದೆ. PSI recruitment illegal case bjp reaction

Tags: #Saaksha TVBJPCongressPriyank Karge
ShareTweetSendShare
Join us on:

Related Posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram