ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಗುರಿ ತಲುಪದ ಅಧಿಕಾರಿಗಳ ತಲೆದಂಡ ನಿಶ್ಚಿತ : ಸಚಿವ ಸುಧಾಕರ್‌

Mahesh M Dhandu by Mahesh M Dhandu
April 26, 2022
in Hale Mysore, Newsbeat, ಬೆಂಗಳೂರು
D K Sudakar Saaksha Tv
Share on FacebookShare on TwitterShare on WhatsappShare on Telegram

Bangalore | ಗುರಿ ತಲುಪದ ಅಧಿಕಾರಿಗಳ ತಲೆದಂಡ ನಿಶ್ಚಿತ : ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರದ ಆರೋಗ್ಯ ಸೇವೆ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿ ತಲುಪದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳನ್ನೇ ಹೊಣೆ ಮಾಡಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ (ಡಿಎಚ್‌ಒ) ಸಭೆಯಲ್ಲಿ ಪ್ರಗತಿ ಪರಿಶೀಲಿಸಿ ಮಂಗಳವಾರ ಮಾತನಾಡಿದ ಸಚಿವರು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕೋಟಿಗಟ್ಟಲೇ ಹಣವನ್ನೂ ವೆಚ್ಚ ಮಾಡಲಾಗುತ್ತಿದೆ. ಆದರೂ ನಿರೀಕ್ಷಿತ ಫಲಿತಾಂಶ ಸಿಗದಿದ್ದರೆ ಇಷ್ಟೇಲ್ಲಾ ವ್ಯವಸ್ಥೆ, ಸಿಬ್ಬಂದಿಗಳಿದ್ದು ಏನು ಪ್ರಯೋಜನ? ಜನರಿಗೆ ಉತ್ತರದಾಯಿತ್ವರಲ್ಲದ ಅಧಿಕಾರಿಗಳ ತಲೆದಂಡ ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.

ಸಣ್ಣಪುಟ್ಟ ಗೊಂದಲ, ಸಮಸ್ಯೆಗಳನ್ನು ಜಿಲ್ಲಾ ಹಂತದಲ್ಲೇ ಬಗೆಹರಿಸಿಕೊಳ್ಳಲು ಸಾಧ್ಯವಿದೆ. ಅದಕ್ಕಾಗಿ ಪ್ರತಿ ತಿಂಗಳು ಡಿಎಚ್‌ಒ ಅವರು ಡಿಎಸ್‌ಒ ಮತ್ತು ಇತರೆ ಸಿಬ್ಬಂದಿಗಳ ಸಭೆ ಕರೆದು ಸಮಾಲೋಚನೆ ಮೂಲಕ ಪರಿಹರಿಸಿಕೊಳ್ಳಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಪ್ರತಿಷ್ಟೆ ಬದಿಗಿಟ್ಟು ಕೆಲಸ ಮಾಡಬೇಕು. ನಿಮ್ಮ ಹಂತದಲ್ಲಿ ಇದು ಸಾಧ್ಯ ಆಗದಿದ್ದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಸಿಕ ಸಭೆ ನಡೆಸುವ ಪದ್ಧತಿ ಜಾರಿಗೂ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ವರ್ಗಾವಣೆಗೆ ಕಡಿವಾಣ

ಈ ವರ್ಷ ಮಾರ್ಗಸೂಚಿ ಅನ್ವಯ ಮಾತ್ರ ವರ್ಗಾವಣೆಗಳನ್ನುಮಾಡಲಾಗುವುದು. ಹಿಂದೆ ನಡೆಯುತ್ತಿದ್ದಂತೆ ಬೇಕಾಬಿಟ್ಟಿ ವರ್ಗಾವಣೆಗೆ ಅವಕಾಶ ನೀಡುವುದಿಲ್ಲ. ಒಟ್ಟಾರೆ ವರ್ಗಾವಣೆ ಪ್ರಮಾಣ ಶೇಕಡಾ 15 ಮೀರದಂತೆ ಎಚ್ಚರವಹಿಸಲಾಗುವುದು. ಕೆಲವರು ಬೆಂಗಳೂರು ನಗರ ಬಿಟ್ಟು ಹೋಗುತ್ತಿಲ್ಲ. ಹತ್ತು ವರ್ಷ ಒಂದೇ ಸ್ಥಳದಲ್ಲಿ ಯಾರಾದರೂ ಇದ್ದರೆ ಅಂತಹ ಹುದ್ದೆಗಳನ್ನು ಖಾಲಿ ಎಂದು ಬೇರೆ ನೇಮಕ ಮಾಡಲಾಗುವುದು. ಜತೆಗೆ ನಗರದೊಳಗೆ ಪರಸ್ಪರ ವರ್ಗಾವಣೆ ಕೋರುವ ಪ್ರಕರಣಗಳನ್ನೂ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಸೂಚನೆ ನೀಡಿರುವಂತೆ ಪ್ರತಿ ಬುಧವಾರ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆ ಮತ್ತು ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಾರ್ವಜನಿಕರ ಅಹವಾಲು ಸ್ವೀಕರಿಸಬೇಕು. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಎಲ್ಲ ಅಧಿಕಾರಿಗಳು ಅನುದಿನದ ಕಾರ್ಯ ನಿರ್ವಹಣೆ ಬಗ್ಗೆ ಡೈರಿ ನಿರ್ವಹಿಸುವುದು ಕಡ್ಡಾಯ. ಇನ್ನು ಮುಂದೆ ಅನಿರೀಕ್ಷಿತ ಭೇಟಿ ಮೂಲಕ ಇದನ್ನು ಪರಿಶೀಲಿಸಲಾಗುವುದು. ಈ ಸೂಚನೆಗಳನ್ನು ಪಾಲಿಸದವರ ವಿರುದ್ಧ ಕ್ರಮ ನಿಶ್ಚಿತ ಎಂದು ಎಚ್ಚರಿಸಿದರು.

bangalore-Karnataka health Minister dr K Sudhakar press meet Saaksha Tv

ಅಧಿಕಾರಿಗಳಿಗೆ ತರಾಟೆ

ಮಕ್ಕಳ ಆರೋಗ್ಯ ಕಾರ್ಯಕ್ರಮ ಅನುಷ್ಠಾನದಲ್ಲಿ ಯಾದಗಿರಿ, ಕೊಪ್ಪಳ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಗದಿತ ಗುರಿ ತಲುಪದಿರುವುದಕ್ಕೆ ಡಿಎಚ್‌ಒಗಳನ್ನು ತರಾಟೆ ತೆಗೆದುಕೊಂಡ ಸಚಿವರು, ಏನಾದರೂ ಸಮಸ್ಯೆಗಳು ಇದ್ದಲ್ಲಿ ಹೇಳಿ ಬಗೆಹರಿಸೋಣ? ಆದರೆ ಎಲ್ಲ ಸೌಲಭ್ಯ ಕೊಟ್ಟ ಮೇಲೂ ಗುರಿ ತಲುಪದಿದ್ದರೆ ಸಹಿಸಲು ಆಗುವುದಿಲ್ಲ. ಜೂನ್‌ 30 ರೊಳಗೆ ಕನಿಷ್ಟ ಶೇ.80 ಪ್ರಗತಿ ಸಾಧಿಸಬೇಕು ಎಂದು ತಾಕೀತು ಮಾಡಿದರು.

ನವಜಾತು ಶಿಶು ಹಾರೈಕೆ ವಿಷಯದಲ್ಲಿ ಜಾವಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ. ಬೇರೆ ಕಡೆ ಕರೆದೊಯ್ಯುವಂತೆ ಸೂಚನೆ ನೀಡುವುದು, ಔಷಧಿಗಳನ್ನು ಖರೀದಿಸುವಂತೆ ಚೀಟಿ ಬರೆದುಕೊಡುವುದು ಮಾಡಬಾರದು. ಲಸಿಕಾಕರಣದಲ್ಲಿ ಆರೋಗ್ಯ ಕಾರ್ಯಕರ್ತರು ಹಿಂದೆ ಬಿದ್ದಿರುವುದು ನಕಾರಾತ್ಮಕ ಸಂದೇಶ ನೀಡುತ್ತಿದೆ. ಉಸ್ತುವಾರಿ ಅಧಿಕಾರಿಗಳು ಸಿಬ್ಬಂದಿಗೆ ಮನವರಿಕೆ ಮಾಡಿಕೊಟ್ಟು ಶೇಕಡಾ ನೂರರಷ್ಟು ಲಸಿಕಾಕರಣ ಗುರಿ ಮುಟ್ಟಬೇಕು ಎಂದು ಕಿವಿ ಮಾತು ಹೇಳಿದರು.

ನಿಗಾ ಇರಲಿ

ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿಸುವ ಸಂಖ್ಯೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ.50ನ್ನು ಮೀರಿದೆ. ಅಗತ್ಯವಿಲ್ಲದಿದ್ದರೂ ಸಿಸೇರಿಯನ್‌ ಮಾಡುತ್ತಿರುವ ಬಗ್ಗೆ ದೂರುಗಳು ಸರ್ವೇ ಸಾಮಾನ್ಯ ಆಗಿದೆ. ಇಂತಹ ಹಣಬಾಕ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಇಟ್ಟು ನಿಯಮ ಉಲ್ಲಂಘಿಸಿದವರ ಆಸ್ಪತ್ರೆಗಳಿಗೆ ಬೀಗ ಜಡಿಯಬೇಕು. ಈ ಬಗ್ಗೆ ನಿಯಮಿತವಾಗಿ ವರದಿ ನೀಡುವ ಪರಿಪಾಠ ಇಟ್ಟುಕೊಳ್ಳಬೇಕು ಎಂದರು.

ರಾಯಚೂರು, ಯಾದಗಿರಿ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಯಕಲ್ಪ ಯೋಜನೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿಲ್ಲ. ಇದಕ್ಕೆ ಕಾರಣಗಳೇನು ಎಂಬ ಬಗ್ಗೆ ವರದಿ ನೀಡಬೇಕು ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಂಡು ವಿವರಗನ್ನು ತಮ್ಮ ಕಚೇರಿಗೆ ಕಳುಹಿಸಬೇಕು ಎಂದು ಸೂಚಿಸಿದರು.

ಒಂದು ತಿಂಗಳ ಅವಧಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಕಾರ್ಯನಿರ್ವಹಿಸಬೇಕು. ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ನೂರರಷ್ಟು ಪ್ರಗತಿ ಸಾಧಿಸಲೇಬೇಕು ಎಂದು ತಾಕೀತು ಮಾಡಿದರು. ಸಭೆಯಲ್ಲಿ ಎಲ್ಲಾ ಜಿಲ್ಲೆಗಳ ಡಿಎಚ್‌ಒಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. bangalore-ಗುರಿ-Karnataka health Minister dr K Sudhakar press meet

Tags: #Saaksha TVbangaloreDr. K Sudhakar
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram