ಮಂಡ್ಯ : ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ರೈತರು ಮತ್ತು ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ರಾತ್ರಿ ಸುರಿದ ಬಾರಿ ಬಿರುಗಾಳಿ ಮಳೆಗೆ ಮರಗಳು ನೆಲಕ್ಕುರುಳಿವೆ. ತೆಂಗು ಅಡಿಕೆ ಬಾಳೆ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿದೆ. ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬಗಳು ಬಿದ್ದಿವೆ. ಹಾಗಾಗಿ ಗ್ರಾಮದ ರಸ್ತೆ ಸಂಪರ್ಕ ಬಂದ್ ಆಗಿದೆ. ಬೃಹತ್ ಗಾತ್ರದ ಮರಗಳು ಮನೆಯ ಮೇಲೆ ಬಿದ್ದಿರುವ ಕಾರಣಕ್ಕೆ ಕುಟುಂಬಸ್ಥರು ನರಳುವಂತೆ ಆಗಿದೆ. ಎರಡು ದಿನಗಳಲ್ಲಿ ಕೈ ಸೇರಬೇಕಿದ್ದ ರೇಷ್ಮೆ ಬೆಳೆ ಸರ್ವನಾಶಬಾಗಿ ರೈತರು ಕಂಗಾಲು ಆಗಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಸರಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








