ಹಿಂದಿ ರಾಷ್ಟ್ರ ಭಾಷೆಯಲ್ಲ – ಕಿಚ್ಚನ ಹೇಳಿಕೆಗೆ ಬೆಂಬಲ ನೀಡಿದ ಗಣ್ಯರು….
ಹಿಂದಿ ರಾಷ್ಟ್ರ ಭಾಷೆಯಲ್ಲ ಎಂಬ ಕಿಚ್ಚ ಸುದೀಪ್ ಹೇಳಿಕೆಗೆ ಸ್ಯಾಂಡಲ್ ವುಡ್ ನಟ ನಟಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಟ ನೀನಾಸಂ ಸತೀಶ್, ಮೋಹಕ ತಾರೆ ರಮ್ಯ, ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಸಾಕಷ್ಟು ತಾರೆಯರು ಸುದೀಪ್ ಗೆ ಬೆಂಬಲ ಸೂಚಿಸಿದ್ದಾರೆ.
ಅಷ್ಟೆ ಅಲ್ಲದೇ ರಾಜಕೀಯದ ಗಣ್ಯರಾದ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಧುರಿಣರು ಕಿಚ್ಚ ಸುದೀಪ್ ಹೇಳಿಕೆಗೆ ಬಂಬಲವಾಗಿ ನಿಂತಿದ್ದಾರೆ.
ಕೆಲವು ದಿನಗಳ ಹಿಂದೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶಿಸುತ್ತಿರುವ ಉಪೇಂದ್ರ ಅಭಿನಯದ ಐ ಯಾಮ್ ಆರ್ ಎಂಬ ಸಿನೆಮಾ ಟೈಟಲ್ ಲಾಂಚ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಿಚ್ಚ ಸುದೀಪ್, ಪ್ಯಾನ್ ಇಂಡಿಯಾ ವಿಚಾರವಾಗಿ ಮಾತನಾಡಿದ್ದರು. ಈ ವೇಳೆ ಹಿಂದಿ ರಾಷ್ಟ್ರ ಭಾಷೆಯಲ್ಲ, ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ನಿರ್ಮಾಣ ಆಗುವ ಸಿನೆಮಾಗಳು ಪ್ಯಾನ್ ಇಂಡಿಯಾ ಅಲ್ಲ. ಪ್ಯಾನ್ ಇಂಡಿಯಾ ಪದವನ್ನು ಬಳಸಬೇಡಿ ಎಂದು ಹೇಳಿದ್ದರು.
ಈ ಬಗ್ಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದು, ಹಿಂದಿ ರಾಷ್ಟ್ರ ಭಾಷೆ ಅಲ್ಲದಿದ್ದರೆ, ಯಾಕೆ ಕನ್ನಡ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡುತ್ತಿದ್ದೀರಾ? ಹಿಂದಿ ನಮಗೆ ಯಾವಾಗಲೂ ಮಾತೃಭಾಷೆ ಆಗಿರುತ್ತದೆ. ಹಿಂದಿ ರಾಷ್ಟ್ರ ಭಾಷೆ ಎಂದು ಹೇಳುವ ಮೂಲಕ ಅಜಯ್ ದೇವಗನ್ ಸುದೀಪ್ಗೆ ತಿರುಗೇಟು ನೀಡಿದ್ದರು.
ಕುರಿತು ಕಿಚ್ಚ್ ಸುದೀಪ್ ಸರಣಿ ಟ್ವೀಟ್ ಮಾಡಿ ಅಜಯ್ ದೇವಗನ್ ಗೆ ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಜಯ್ ದೇವಗನ್ ವಿರುದ್ಧ ನೆಟ್ಟಿಗರು ಗರಂ ಆಗಿದ್ದು, ಅಜಯ್ ದೇವಗನ್ ಪಾನ್ ಮಸಾಲಾ ತಿಂದು ನಶೆಯಲ್ಲಿದ್ದಾರೆ ಎಂದು ಕಾಲು ಎಳೆದಿದ್ದಾರೆ.








