PSI ಅಕ್ರಮ ನೇಮಕಾತಿ – ದಿವ್ಯ ಹಾಗರಗಿ ಗೆ ಎಚ್ಚರಿಕೆ ನೀಡಿದ ಅರಗ ಜ್ಞಾನೇಂದ್ರ…
ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದಿವ್ಯ ಹಾಗರಗಿಗೆ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ. ಗೌರವಯುತವಾಗಿ ಶರಣಾಗಿ ಇಲ್ಲದಿದ್ದರೆ ಆಸ್ತಿ ಮುಟ್ಟುಗೋಲು ಹಾಕುತ್ತೆವೆ ಎಂದು ದಿವ್ಯ ಹಾಗರಗಿ ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು ದಿವ್ಯ ಹಾಗರಗಿ ಆವರು ಸ್ಟ್ರಾಂಗ್ ಏನಿಲ್ಲ ಅವರು ಊರು ಬಿಟ್ಟಿದ್ದಾರೆ. ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ನೀಡಲಾಗಿದೆ. ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಎಲ್ಲವೂ ತನಿಖೆ ಮಾಡಲು ಸಿಐಡಿಗೆ ವಹಿಸಿದ್ದೇವೆ. ಹಣಕ್ಕಾಗಿ ಸರ್ಕಾರಿ ಉದ್ಯೋಗಳನ್ನ ಮಾರುವ ಗ್ಯಾಂಗ್ ಅನ್ನು ಹೊರಗೆ ತರುತ್ತೇವೆ ಎಂದರು.
ಇದೇ ವೇಳೆ, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹಾಜರಾಗದ ವಿಷಯಕ್ಕೆ ಪ್ರತಿಕ್ರಿಯಿಸಿ, ಪ್ರಿಯಾಂಕ್ ಖರ್ಗೆ ಅನೇಕ ಆರೋಪ ಮಾಡಿದ್ದಾರೆ. ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಅವರು ತನಿಖೆಗೆ ಸಹಕಾರ ನೀಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. ನನ್ನ ಬಳಿ ದಾಖಲೆ ಇದೆ ಅನ್ನುತ್ತಾರೆ. ಆ ದಾಖಲೆ ಕೊಡಬಹುದಲ್ಲವೇ? ಎಂದು ಪ್ರಶ್ನಿಸಿದರು.