Govinda Karajola | ಭಾಷೆ ಕುರಿತು ಯಾರ ಜಟಾಪಟಿ ಅಗತ್ಯತೆ ಇಲ್ಲ
ಬೆಳಗಾವಿ : ಭಾಷೆ ಕುರಿತಂತೆ ಯಾರ ಜಟಾಪಟಿಯೂ ಅಗತ್ಯತೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಹಿಂದಿ ರಾಷ್ಟ್ರ ಭಾಷೆ ಎಂಬ ವಿಚಾರವಾಗಿ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವಿನ ಟ್ವೀಟ್ ಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂಬ ಸುದೀಪ್ ಹೇಳಿಕೆಗೆ ಸ್ಯಾಂಡಲ್ ವುಡ್ ಬೆಂಬಲವಾಗಿ ನಿಂತಿದೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕಾರಣಿಗಳು ಸುದೀಪ್ ಮಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದೀಗ ಈ ವಿಚಾರವಾಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಭಾಷೆ ಕುರಿತು ಯಾರ ಜಟಾಪಟಿನೂ ಅಗತ್ಯತೆ ಇಲ್ಲ. ದೇಶದಲ್ಲಿ ಆಯಾ ಪ್ರದೇಶ, ರಾಜ್ಯಗಳಲ್ಲಿ ಮಾತೃಭಾಷೆ ಇದೆ. ಅದೇ ರೀತಿ ಕರ್ನಾಟಕದಲ್ಲಿ ಕನ್ನಡ ಮಾತೃಭಾಷೆ. ಕನ್ನಡ ಭಾಷೆ ನಮಗೆ ತಾಯಿ ಸಮಾನ. 2500 ಸಾವಿರ ವರ್ಷದಿಂದ ಈ ನಾಡಿನಲ್ಲಿ ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕರು ಮಾಡಿದ್ದಾರೆ. ಸೂರ್ಯ ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ. ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ಹೇಳಿದ್ದಾರೆ.
ಅಲ್ಲದೇ ನಮ್ಮನ್ನು 600 ವರ್ಷಗಳ ಬ್ರಿಟಿಷರು, ಮುಸ್ಲಿಮರು, ಪೋರ್ಚುಗೀಸರು ಸೇರಿ ಪರಕೀಯರು ಆಳಿದ್ದಾರೆ. ಆದರೂ ಸಹ ಕನ್ನಡ ಭಾಷೆ ನಶಿಸಿ ಹೋಗಿಲ್ಲ, ಹಿಂದೂ ಧರ್ಮ ನಶಿಸಿ ಹೋಗಿಲ್ಲ. ಹಿಂದೂ ಧರ್ಮ ಮತ್ತು ಮಾತೃ ಭಾಷೆ ಶಾಶ್ವತವಾಗಿ ಇರುತ್ತದೆ ಎಂದಿದ್ದಾರೆ ಸಚಿವರು. minister Govind Karjol reaction on hindi Imposition