ದ್ವೇಷದ ಭಾಷಣಕ್ಕೆ ಕಡಿವಾಣ ಹಾಕಲು ಸಮಿತಿ ರಚನೆ : ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಇತ್ತೀಚಿನ ದಿಗಳಲ್ಲಿ ದ್ವೇಷದ ಭಾಷಣ ಹೆಚ್ಚಾಗುತ್ತಿದ್ದು, ಹೀಗಾಗಿ ಸುಪ್ರೀಂಕೋರ್ಟ್ ಸೂಚನೆಯಂತೆ ಭಾಷಣಗಳ ಕಡಿವಾಣಕ್ಕೆ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ರಾಜ್ಯ ಅಲ್ಲದೇ ದೇಶದಾದ್ಯಂತ ದ್ವೇಷ ಭಾಷಣ ಹೆಚ್ಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ಇನ್ನೂ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇನ್ನೂ ಸ್ಥಾಯಿಕ ವ್ಯವಸ್ಥೆ ಕುರಿತು ಚರ್ಚಿಸಲು ಏ.30 ರಂದು ದೆಹಲಿಯಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಶುಕ್ರವಾರ(ಇಂದು) ದೆಹಲಿಗೆ ತೆರಳುತ್ತಿದ್ದೇನೆ ಎಂದು ಇದೇ ವೇಳೆ ಹೇಳಿದರು.








