PSI ಅಕ್ರಮ ನೇಮಕಾತಿ ಪ್ರಕರಣ – ಮರು ಪರೀಕ್ಷೆ ನಡೆಸಲು ನಿರ್ಧರಿಸಿದ ರಾಜ್ಯ ಸರ್ಕಾರ
ರಾಜ್ಯದಲ್ಲಿ ನಡೆದಿರುವ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ದಿ ಗೋಷ್ಟಿಯಲ್ಲಿ ಹೇಳಿದ್ದಾರೆ.
ಬೆಂಗಳೂರಿನ ಕೇಂದ್ರಗಳ್ಲಲೂ ಅಕ್ರಮ ನಡೆದಿರುವ ಶಂಕೆ ಹಿನ್ನಲೆ ಮತ್ತೊಮ್ಮೆ ಮರು ಪರೀಕ್ಷೆಗೆ ತೀರ್ಮಾನಿಸಲಾಗಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು ಆರೋಪಿಗಳಿಗೆ ಮರು ಪರೀಕ್ಷೆ ಸಿಗುವುದಿಲ್ಲ, ಶೀಘ್ರವೇ ಮರು ಪರೀಕ್ಷೆಯ ದಿನಾಂಕವನ್ನ ಪ್ರಕಟಿಸುತ್ತೇವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಪರೀಕ್ಷಾ ಅವ್ಯವಹಾರಗಳನ್ನ ತಡೆಗಟ್ಟಲು ಕಠಿಣ ಕಾಯ್ದೆ ರೂಪಿಸಲು ಮುಂದಾಗಿದ್ದೇವೆ ಮುಂದೆ ಈ ಕುರಿತು ವಿವಿರಗಳನ್ನ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.
ಅಕ್ರಮ ನೇಮಕಾತಿ ಕುರಿತಂತೆ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದ್ದು, ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನ ಇಂದು ಬಂಧಿಸಲಾಗಿದೆ.
psi-recruitment scam re-exam -says home minister araga jnanendra