ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ
ಬೆಂಗಳೂರು : ಹಿಂದಿ ಸಂವಹನಕ್ಕಾಗಿ ಭಾರತದ ಭಾಷೆಯಾಗಿದೆ. ನಾವು ಹಿಂದಿಯನ್ನು ಸಂಪರ್ಕ ಭಾಷೆಯನ್ನಾಗಿ ಬಳಸಬೇಕು. ಹಿಂದಿ ಭಾಷೆಯ ಕುರಿತು ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಹಿಂದಿಯನ್ನು ರಾಷ್ಟ್ರೀಯ ಭಾಷಯನ್ನಾಗಿ ಮಾಡುವುದರಲ್ಲಿ ತಪ್ಪೇನಿಲ್ಲ ಎಂಬ ಕೆಲ ಬಿಜೆಪಿ ನಾಯಕರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ ಎಂದು ಕುಟುಕಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ.. ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ.
ಕೇಂದ್ರ ಗೃಹ ಸಚಿವ @AmitShah ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ @BJP4Karnataka ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ.
8/12#HindiImposition— Siddaramaiah (@siddaramaiah) April 29, 2022
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ ಟಿ ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
6/12#HindiImposition #Kannadiga— Siddaramaiah (@siddaramaiah) April 29, 2022
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ. BJP leaders don’t be Amit Shah’s slaves siddaramaiah









