ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dr K Sudhakar | ಮೋದಿಯವರ “ನವ ಭಾರತ”ದ ಕನಸು ನನಸಾಗುತ್ತಿದೆ

Mahesh M Dhandu by Mahesh M Dhandu
April 29, 2022
in Newsbeat, State, ರಾಜ್ಯ
Dr K Sudhakar Modi's dream of "New India" is coming true saaksha tv

Dr K Sudhakar Modi's dream of "New India" is coming true saaksha tv

Share on FacebookShare on TwitterShare on WhatsappShare on Telegram

Dr K Sudhakar | ಮೋದಿಯವರ “ನವ ಭಾರತ”ದ ಕನಸು ನನಸಾಗುತ್ತಿದೆ

ಬೆಂಗಳೂರು : ಆಧುನಿಕ ಜಗತ್ತಿಗೆ ವೈದ್ಯರು ಒಗ್ಗಿಕೊಂಡು ಸಮಾಜಕ್ಕೆ ಉತ್ತಮ ಸೇವೆ ನೀಡಬೇಕು. ವೈದ್ಯರ ಕೆಲಸದಲ್ಲಿ ಧರ್ಮ, ಜಾತಿಯ ಭೇಧವಿಲ್ಲ. ಹಳ್ಳಿ ಹಳ್ಳಿಯಲ್ಲೂ ಆರೋಗ್ಯ ಸೇವೆ ಸುಲಭವಾಗಿ ಸಿಕ್ಕಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಬೆಂಗಳೂರಿನ ಬಿಜಿಎಸ್ ಮೆಡಿಕಲ್ ಕಾಲೇಜಿನ ಮೂರನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವೈದ್ಯರು ತಪಾಸಣೆ ಅಥವಾ ಚಿಕಿತ್ಸೆಯ ವೇಳೆ ರೋಗಿಯ ಮತ್ತು ಅವರ ಸಂಬಂಧಿಕರ ಕಣ್ಣಿನಲ್ಲಿರುವ ಪ್ರೀತಿ ಅಥವಾ ಕಷ್ಟಗಳನ್ನು ಕಾಣುವಂತಗಬೇಕು. ಅವರ ಕಣ್ಣಿರು ಒರೆಸಿದರೆ ಅದುವೇ ನಿಮಗೆ ಆಶೀರ್ವಾದ ಎಂದು ಅಭಿಪ್ರಾಯ ಪಟ್ಟರು.

ಬಿಜಿಎಸ್​​ನ 150 ವೈದ್ಯ ವಿದ್ಯಾರ್ಥಿಗಳು ಇಂದಿನಿಂದ ಸಮಾಜದಲ್ಲಿ ನಿಜವಾದ ಸವಾಲನ್ನು ಎದುರಿಸಲಿದ್ದಾರೆ. ಎಲ್ಲಾ ಸಮಯದಲ್ಲೂ ಸರ್ಕಾರ ಎಲ್ಲಾ ವೈದ್ಯರ ನೆರವಿಗೆ ನಿಲ್ಲಲಿದೆ. ವೈದ್ಯರಿಗೆ ಯಾರ ಭಯವೂ ಬೇಡ. ನಿಮ್ಮ ಕೆಲಸವನ್ನು ನೀವು ಬದ್ಧತೆ ಮತ್ತು ಶ್ರದ್ಧೆಯಿಂದ ಮಾಡಿ. ಸಮಾಜಕ್ಕೆ ಮಾದರಿ ಆಗುವಂತಹ ಕೆಲಸಗಳನ್ನು ಮಾಡಿ ಎಂದು ಹೇಳಿದರು

ಶಾಲಾ ಶಿಕ್ಷಕನ ಮಗನಾಗಿರುವ ನನಗೆ ವೈದ್ಯಕೀಯ ಎಷ್ಟು ದುಬಾರಿ ಅನ್ನುವುದರ ಅರಿವಿದೆ. ಉನ್ನತ ಶಿಕ್ಷಣದಲ್ಲಿ ವಿಶ್ವದಲ್ಲೇ ವೈದ್ಯಕೀಯ ಶಿಕ್ಷಣ ಎಲ್ಲಕ್ಕಿಂತ ದುಬಾರಿ . ಭಾರತ ಮಾತ್ರವಲ್ಲ, ವಿಶ್ವದ ಎಲ್ಲಾ ಕಡೆಯೂ ವೈದ್ಯಕೀಯ ಶಿಕ್ಷಣ ದುಬಾರಿ ಆಗಿದೆ. ಆದರೆ ಪೋಷಕರು ತ್ಯಾಗ, ಬದ್ಧತೆ ಮತ್ತು ಕನಸು ಇಟ್ಟುಕೊಂಡು ಮಕ್ಕಳನ್ನು ವೈದ್ಯರನ್ನಾಗಿ ಮಾಡುತ್ತಾರೆ. ತನ್ನ ಇತಿಹಾಸ ಅರಿತವನು ಹೊಸ ಇತಿಹಾಸ ಸೃಷ್ಟಿಸಬಲ್ಲನು ಅನ್ನುವ ಮಾತಿದೆ. ಇತಿಹಾಸದ ಮೂಲಕ ಭವಿಷ್ಯವಬನ್ನು ಕಟ್ಟ ಬಹುದು ಎಂದು ಹೇಳಿದರು.

Dr K Sudhakar Modi's dream of "New India" is coming true saaksha tv

ಎಂಬಿಬಿಎಸ್ ಪದವಿ ಪಡೆದ ಈ ಬ್ಯಾಚ್ ಸ್ಪೆಷಲ್ ಬ್ಯಾಚ್ ಆಗಿದೆ. 1918-1919ರ ನಂತರ ಮೊದಲ ಬಾರಿಗೆ ಸಾಂಕ್ರಾಮಿಕ ರೋಗ ಕೊರೊನಾ ಬಾಧಿಸಿತ್ತು. ಆಗಿನ ವೈದ್ಯಕೀಯ ವಿದ್ಯಾರ್ಥಿಗಳು ಸ್ಪಾನಿಷ್ ಫ್ಲೂ ವಿರುದ್ಧ ಹೋರಾಟ ಮಾಡುವ, ಕೆಲಸ ಮಾಡುವ ಅವಕಾಶ ಪಡೆದಿದ್ದರು. ಈಗ ಈ ಬ್ಯಾಚ್ ಗೆ ಕೊರೊನಾ ವಿರುದ್ಧ ಹೋರಾಟ ಮಾಡುವ ಅವಕಾಶ ಸಿಕ್ಕಿತ್ತು. ಕಲಿಕೆಯ ಜೊತೆ ಪ್ರಾಕ್ಟೀನ್ ಅನುಭವ ಸಿಕ್ಕಿದೆ. ವೈದ್ಯ ವೃತ್ತಿಯ ಆರಂಭದಲ್ಲಿ ಸಿಕ್ಕಿದ ಈ ಅನುಭವ ನಿಮ್ಮೆಲ್ಲರನ್ನು ಅತ್ಯುತ್ತಮ ವೈದ್ಯನಾಗಿ ಮಾಡಲಿದೆ ಎಂದು ಆಶಿಸಿದರು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ 900 ಜನರಿಗೆ ಒಬ್ಬ ವೈದ್ಯ ಬೇಕಾಗುತ್ತದೆ. 2014ಕ್ಕೂ ಮೊದಲು 1300 ಜನಕ್ಕೆ ಒಬ್ಬ ವೈದ್ಯರ ಲಭ್ಯತೆ ಇತ್ತು. ಆದರೆ ಇವತ್ತು ಅಲೋಪಥಿಕ್, ಆಯುರ್ವೇದಮ ಯುನಾನಿ ಮತ್ತು ಯೋಗಿಕ್ ಸೈನ್ಸ್ ಸೇರಿಕೊಂಡು ಕರ್ನಾಟಕದಲ್ಲಿ 900 ಜನರಿಗೆ ಒಬ್ಬರ ವೈದ್ಯರ ಲಭ್ಯತೆ ಇದೆ. 2014ರಿಂದ ಬಿಜೆಪಿ ಸರ್ಕಾರ ದೇಶದ ಎಲ್ಲಾ ಕಡೆ ಸುಮಾರು 200ಕ್ಕೂ ಅಧಿಕ ಮೆಡಿಕಲ್ ಕಾಲೇಜುಗಳುನ್ನು ಆರಂಭಿಸಿದೆ. ಪ್ರತೀ ವರ್ಷ ಸುಮಾರು 65, 000ಕ್ಕೂ ಅಧಿಕ ಎಂಬಿಬಿಎಸ್ ವೈದ್ಯರು ಹಾಗೂ 30,000 ಸ್ನಾತಕೋತ್ತರ ವೈದ್ಯರು ಸಮಾಜ ಸೇವೆಗೆ ಸಿಗುತ್ತಿದ್ದಾರೆ. ಯಾರಿಗೂ ಮನುಷ್ಯನ ಜೀವನ ಅಥವಾ ಜೀವಂತ ಸಮಯವನ್ನು ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ವೈದ್ಯರಿಗೆ ಅದು ಸಾಧ್ಯವಿದೆ. ಹೀಗಾಗಿ ವೈದ್ಯರು ಎಲ್ಲರಿಗಿಂತಲೂ ವಿಭಿನ್ನ ಎಂದು ಹೇಳಿದರು.

ಹೆಣ್ಣುಮಕ್ಕಳು ಹೆಚ್ಚಾಗಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಮಹಿಳಾ ಸಬಲೀಕರಣದ ಹೆಜ್ಜೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಂಡ ಕನಸಿನ ನವ ಭಾರತವಾಗಿದೆ. ವೈದ್ಯಕೀಯ ಶಿಕ್ಷಣದ ಅಭಿವೃದ್ಧಿ ಇನಷ್ಟು ಆಗಬೇಕು. ವಿದೇಶಿ ವೈದ್ಯರು, ಶಿಕ್ಷಣ ಸಂಸ್ಥೆಗಳ ಜೊತೆ ಸ್ಪರ್ಧೆ ಮಾಡಬೇಕು. ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದೆ. ತಂತ್ರಜ್ಞಾನದ ಬಳಕೆ ಮತ್ತು ಹೊಸ ಹೊಸ ಸಂಶೋಧನೆಗಳ ಹೆಚ್ಚು ಆಗಬೇಕು ಎಂದು ತಿಳಿಸಿದರು.

ಕೊರೊನಾ ಬಳಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯಲ್ಲಿ ಬದಲಾವಣೆ ಆಗಿದೆ. 50 ವರ್ಷಗಳಲ್ಲಿ ಆಗದೇ ಇರುವುದು ಸಾಂಕ್ರಾಮಿಕ ರೋಗದ ಸಮಯದಲ್ಲಿ ಆಗಿದೆ. ,ಮೂಲ ಸೌಕರ್ಯದ ಅಭಿವೃದ್ಧಿಯಿಂದ ಹಿಡಿ ಎಲ್ಲವೂ ಈಗ ಲಭ್ಯವಿದೆ. ರಾಜ್ಯದಲ್ಲಿ 50,000 ಆಕ್ಸಿಜನ್ ಬೆಡ್ ಗಳಿವೆ. ಖಾಸಗಿಯಲ್ಲಿ 1 ಲಕ್ಷಕ್ಕೂ ಅಧಿಕ ಬೆಡ್ ಗಳಿವೆ. ಈ ಮೂಲ ಸೌಕರ್ಯಗಳ ಅಭಿವೃದ್ಧಿಯಿಂದಲೇ ಕೊರೊನಾವನ್ನು ಕಟ್ಟಿಹಾಕಲು ಸಾಧ್ಯವಾಯಿತು. ಕೊರೊನಾ ವೇಳೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ. ಕಳೆದ 1 ವರ್ಷದಲ್ಲಿ ಸರ್ಕಾರ 1750 ವೈದ್ಯರ ನೇಮಕ ಮಾಡಿದೆ. ಆದರೆ ಎಲ್ಲಾ ವೈದ್ಯರು ಹಳ್ಳಿಯಲ್ಲಿ ಕನಿಷ್ಠ 1 ವರ್ಷ ಸೇವೆ ಮಾಡಬೇಕು. ಹಳ್ಳಿ ಜನರಿಗೆ ಆರೋಗ್ಯ ವ್ಯವಸ್ಥೆಯ ಅವಶ್ಯಕತೆ ಇದೆ. ಹಳ್ಳಿ ಹಳ್ಳಿಯಲ್ಲಿ ಆರೋಗ್ಯ ಸೇವೆ ಸುಲಭವಾಗಿ ಸಿಕ್ಕಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು. Dr K Sudhakar Modi’s dream of “New India” is coming true

Tags: #Saaksha TVDr. K SudhakarkarnatakaNarendra mod
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram