ವಿವಾಹಿತ ಮಹಿಳೆಯನ್ನು ಪಟಾಯಿಸಿದ ಡೋಂಗಿ ಬಾಬಾ
ಚಾಮರಾಜನಗರ: ಚಿಕಿತ್ಸೆಗೆಂದು ಬಂದಿದ್ದ ವಿವಾಹಿತ ಮಹಿಳೆಯನ್ನು ಬಾಬಾ ಪಟಾಯಿಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ಇದನ್ನು ತಿಳಿದ ಪತಿ ಮಹಮದ್ ಅಫ್ಘಾನ್ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೈಸೂರಿನ ಬಾಬಾ ಖುರ್ರಾಂ ಪಾಷಾ ಎಂಬ ನಕಲಿ ಬಾಬಾನ ಬಳಿ ಚಿಕಿತ್ಸೆ ಪಡೆಯಲು ಈ ದಂಪತಿ ಆಗಾಗ್ಗೆ ಹೋಗುತ್ತಿದ್ದರಂತೆ. ಚಿಕಿತ್ಸೆ ನೆಪದಲ್ಲಿ ಅಫ್ಘಾನ್ ಪತ್ನಿಯನ್ನು ಪಾಷಾ ತನ್ನ ಬಲೆಗೆ ಬೀಳಿಸಿಕೊಂಡಿದ್ದಾನೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಪತಿ ಪತ್ನಿಗೆ ಗಲಾಟೆ ಆಗಿತ್ತಂತೆ.
ಪರಿಣಾಮ ಪತ್ನಿ ತನ್ನ ಮೈಸೂರಿನ ಪೋಷಕರ ಮನೆಯಲ್ಲಿ ಕಳೆದ ಒಂದು ತಿಂಗಳಿನಿಂದ ವಾಸವಿದ್ದಾಳೆ ಎಂದು ತಿಳಿದು ಬಂದಿದೆ. ಈ ಎಲ್ಲಾ ಘಟನೆಯಿಂದ ತೀವ್ರವಾಗಿ ಮನನೊಂದ ಪತಿ ಇಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಡೆತ್‌ನೋಟ್ ಸಹ ಬರೆದಿಟ್ಟಿದ್ದಾರೆ.
ತನ್ನ ಸಾವಿಗೆ ಮೈಸೂರಿನ ಡೋಂಗಿ ಬಾಬಾ ಖುರ್ರಾಂ ಪಾಷಾ ಮತ್ತು ಈತನ ಇಬ್ಬರು ಸಹಚರರೇ ಕಾರಣ. ನನ್ನ ಪತ್ನಿಯ ತಲೆ ಕೆಡಿಸಿ ಡೋಂಗಿ ಬಾಬಾಗೆ ತಲೆಹಿಡಿದಿದ್ದಾರೆ. ಇವರನ್ನ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. ಈ ಸಂಬಂಧ ಮೃತನ ಸಂಬಂಧಿಕರು ದೂರು ನೀಡಿದ್ದು, ಆತ್ಮಹತ್ಯೆಗೆ ಪ್ರಚೋದನೆ ಎಂದು ಗುಂಡ್ಲುಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.








