PSI ಮರು ಪರೀಕ್ಷೆ ನಡೆಸುವುದು ಸರಿಯಲ್ಲ | ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಅಭ್ಯರ್ಥಿಗಳು
ಬೆಂಗಳೂರು: 545 PSI ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಹೀಗಾಗಿ ಸರಕಾರ ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಪಿಎಸ್‌ಐ ಅಭ್ಯರ್ಥಿಗಳು ತೀರ್ವ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಪಿಎಸ್‌ಐ ಅಭ್ಯರ್ಥಿಗಳು ನಗರದ ಹಲವೆಡೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ವೈಮನಸ್ಸು ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ‘ಕಾನೂನು ಪ್ರಕಾರ ನೂರು ಜನಕ್ಕೆ ಶಿಕ್ಷೆ ಆಗದಿದ್ದರೂ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾದರು’ ಎನ್ನುತ್ತದೆ. ಆದರೆ, ಇಲ್ಲಿ ಬುಹುತೇಕ ನಿರಪರಾಧಿಗಳಿಗೆ ಶಿಕ್ಷೆ ಆಗುತ್ತಿದೆ. ಈ ರೀತಿಯ ಸರ್ಕಾರದ ನೀತಿ ಸರಿ ಅಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಮರು ಪರೀಕ್ಷೆಯಿಂದ ಪ್ರಾಮಾಣಿಕವಾಗಿ ಬರೆದವರಿಗೂ ಅನ್ಯಾಯವಾಗುತ್ತದೆ. ಅಲ್ಲದೆ ನಮ್ಮಲ್ಲಿ ಅನೇಕರು ವಯೋಮಿತಿ ಗಡಿಯಲ್ಲಿ ಇದ್ದಾರೆ. ಅವರ ಕನಸು ಮತ್ತು ಪರಿಶ್ರಮ ಎರಡೂ ವ್ಯರ್ಥವಾಗುತ್ತದೆ ಎಂದರು. ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿವಿಧ ಅಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದು, ಶನಿವಾರ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಇನ್ನೂ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನದ ಹಿನ್ನೆಲೆ ನಿಷ್ಪಕ್ಷಪಾತ ತನಿಖೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ನಿಂದ ನಿನ್ನೆ(ಶುಕ್ರವಾರ) ಪ್ರತಿಭಟನೆ ನಡೆಸಲಾಯಿತು.